ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಆಗಮನ: ಹುಬ್ಬಳ್ಳಿಯಲ್ಲಿ ರೋಡ್ ಶೋನಲ್ಲಿ ಭಾಗಿ

ಹುಬ್ಬಳ್ಳಿ,ಜನವರಿ,12,2023(www.justkannada.in):  ಹುಬ್ಬಳ್ಳಿಯಲ್ಲಿ ನಡೆಯುವ 26ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ.

ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿ ಏರ್ ಪೋರ್ಟ್ ಗೆ ಬಂದಿಳಿದ ಪ್ರಧಾನಿ ಮೋದಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಇನ್ನಿತರರು ಸ್ವಾಗತ ಕೋರಿದರು. ನಂತರ ವಿಮಾನ ನಿಲ್ದಾಣದಿಂದ ರಾಷ್ಟ್ರೀಯ ಯುವಜನೋತ್ಸವ ನಡೆಯುವ ರೈಲ್ವೆ ಮೈದಾನದವರೆಗೆ ರೋಡ್ ಶೋ  ನಡೆಸಿದರು.

ರೋಡ್ ಶೋ  ವೇಳೆ ರಸ್ತೆ ಇಕ್ಕೆಲೆಗಳಲ್ಲಿ ನೆರೆದಿದ್ದ ಅಭಿಮಾನಿಗಳತ್ತ ಪ್ರಧಾನಿ ಮೋದಿ ಕೈಬೀಸಿದರು. ರಸ್ತೆಯುದ್ದಕ್ಕೂ ಅಭಿಮಾನಿಗಳು ಮೋದಿ ಅವರ  ಕಾರಿಗೆ ಹೂಮಳೆಗರೆದು ಮೋದಿ ಅವರಿಗೆ ಜೈಕಾರ ಕೂಗಿದರು.

Key words: PM Modi- arrives at- National Youth- Festival- Hubli