Saturday, August 15, 2026

BDA Apartments

Home Front Page ಪ್ರಧಾನಿ ಮೋದಿ ಅವರಿಗೆ ಹುಟ್ಟುಹಬ್ಬದ  ಶುಭ ಕೋರಿದ  ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿ ಹಲವು ಗಣ್ಯರು.

ಪ್ರಧಾನಿ ಮೋದಿ ಅವರಿಗೆ ಹುಟ್ಟುಹಬ್ಬದ  ಶುಭ ಕೋರಿದ  ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿ ಹಲವು ಗಣ್ಯರು.

ನವದೆಹಲಿ,ಸೆಪ್ಟಂಬರ್,17,2022(www.justkannada.in):  ಇಂದು ಪ್ರಧಾನಿ ನರೇಂದ್ರ ಮೋದಿ ಅವರ 72ನೇ ಹುಟ್ಟುಹಬ್ಬದ ಸಂಭ್ರಮವಾಗಿದ್ದು, ರಾಷ್ಟ್ರಪತಿ  ದ್ರೌಪದಿ ಮುರ್ಮು,  ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ.

ಟ್ವೀಟ್ ಮೂಲಕ ಪ್ರಧಾನಿ ಮೋದಿ ಅವರಿಗೆ ಹುಟ್ಟುಹಬ್ಬದ ಶುಭ ಕೋರಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು,  ‘ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದು ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ನಿಮ್ಮ ನೇತೃತ್ವದಲ್ಲಿ ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಸೃಜನಶೀಲತೆಯಿಂದ ರಾಷ್ಟ್ರ ನಿರ್ಮಾಣ ಅಭಿಯಾನ ನಡೆಯಬೇಕೆಂದು ನಾನು ಬಯಸುತ್ತೇನೆ. ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿ ಶುಭ ಹಾರೈಸಿದ್ದು, ಪ್ರಧಾನಿ ನರೇಂದ್ರ ಮೋದಿಜಿ ಅವರಿಗೆ ಜನ್ಮದಿನದ ಶುಭಾಶಯಗಳು. ದೇಶದ ಅತ್ಯಂತ ಪ್ರೀತಿಯ ನಾಯಕ ಮತ್ತು ನಮ್ಮೆಲ್ಲರ ಸ್ಫೂರ್ತಿಯಾಗಿರುವ ಮೋದಿ ಅವರಿಗೆ ಉತ್ತಮ ಆರೋಗ್ಯ ಮತ್ತು ದೇವರಿಂದ ದೀರ್ಘಾಯುಷ್ಯ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸಹ ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಕೋರಿದ್ದಾರೆ. ದೇಶದ ಸೇವೆ ಮಾಡಲು ಹೆಚ್ಚಿನ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ, ಧೀಮಂತ ನಾಯಕ, ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕದ ಜನತೆಯ ಪರವಾಗಿ ಜನ್ಮದಿನದ ಶುಭಾಶಯಗಳು. ಅವರಿಗೆ ಆಯುಷ್ಯ, ಆರೋಗ್ಯ ಪ್ರಾಪ್ತಿಯಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶುಭ ಕೋರಿದ್ದಾರೆ.

Key words: PM -Modi – birthday- President -Draupadi Murmu- wished