Sunday, August 2, 2026

BDA Apartments

Home Front Page ಮೋದಿ, ಬೊಮ್ಮಾಯಿ ಸರ್ಕಾರ ದಪ್ಪ ಚರ್ಮದ ಸರ್ಕಾರ- ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ.

ಮೋದಿ, ಬೊಮ್ಮಾಯಿ ಸರ್ಕಾರ ದಪ್ಪ ಚರ್ಮದ ಸರ್ಕಾರ- ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ.

ಬೆಂಗಳೂರು,ಸೆಪ್ಟಂಬರ್,24,2021(www.justkannada.in): ಬೆಲೆ ಏರಿಕೆಯಿಂದ ಜನ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಜನರ ನೋವಿಗೆ ಸ್ಪಂದಿಸುವ ಗುಣ ಸರ್ಕಾರಕ್ಕೆ ಇಲ್ಲ. ಮೋದಿ, ಬೊಮ್ಮಾಯಿ ಸರ್ಕಾರ ದಪ್ಪ ಚರ್ಮದ ಸರ್ಕಾರ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು.

ಬೆಲೆ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ ಕಿಡಿಕಾರಿದ ಮಾಜಿ ಸಿಎಂ ಸಿದ್ಧರಾಮಯ್ಯ, ಬೆಲೆ ಏರಿಕೆಯಿಂದ ಜನರು ಕಂಗಾಲಾಗಿದ್ದಾರೆ. ಇಂದು ಪ್ರತಿಯೊಬ್ಬರ ಮನೆಗೆ ಬೆಂಕಿ ಬಿದ್ದಿದೆ.  ಬಿಜೆಪಿಯವರು ಜನರ ಜೇಬಿಕೆ ಕೈ ಹಾಕಿದ್ದಾರೆ. ಇದು ಜನ ವಿರೋಧಿ ಸರ್ಕಾರ. ಬಿಜೆಪಿ ಕಾರ್ಪೋರೇಟ್ ಪರವಾಗಿರುವ ಪಕ್ಷ. ಬಿಜೆಪಿಯವರು ಲಜ್ಜೆಗೆಟ್ಟವರು ಎಂದು ಹರಿಹಾಯ್ದರು.

ಬಿಜೆಪಿ ಸರ್ಕಾರ ಜನರ ರಕ್ತ ಕುಡಿಯುತ್ತಿದೆ. ಬಿಜೆಪಿಯಿಂದ ನಾವು ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಸರ್ಕಾರದ ಗಮನ  ಸೆಳೆಯಲು. ಎತ್ತಿನಗಾಡಿ, ಸೈಕಲ್, ಟಾಂಗಾ ಗಾಡಿ ಜಾಥಾ ನಡೆಸಿದವು ಎಂದರು.

Key words: pm Modi- Bommai-government – thick-skinned –government-Former CM -siddaramaiah