Tuesday, August 18, 2026

BDA Apartments

Home Front Page ಕಾಮನ್’ವೆಲ್ತ್ ಪದಕ ಸಾಧಕರಿಗೆ ಪ್ರಧಾನಿ ಮೋದಿ ಅಭಿನಂದನೆ

ಕಾಮನ್’ವೆಲ್ತ್ ಪದಕ ಸಾಧಕರಿಗೆ ಪ್ರಧಾನಿ ಮೋದಿ ಅಭಿನಂದನೆ

ಬೆಂಗಳೂರು, ಜುಲೈ 31, 2022 (www.justkannada.in): ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದಿರುವ ವೇಟ್‌ಲಿಫ್ಟರ್ ಬಿಂದ್ಯಾರಾಣಿ ದೇವಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಬರ್ಮಿಂಗ್ಹ್ಯಾಮ್‌ನ ಸಿಡಬ್ಲ್ಯೂಜಿಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಬಿಂದ್ಯಾರಾಣಿ ದೇವಿ ಅವರಿಗೆ ಅಭಿನಂದನೆಗಳು. ಈ ಸಾಧನೆಯು ಅವರ ದೃಢತೆಯ ದ್ಯೋತಕವಾಗಿದೆ ಮತ್ತು ಇದು ಪ್ರತಿಯೊಬ್ಬ ಭಾರತೀಯನಿಗೂ ತುಂಬಾ ಸಂತೋಷ ತಂದಿದೆ ಎಂದು ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿ , ಬಿಂದ್ಯಾರಾಣಿ ದೇವಿ ಅವರ ಸಾಧನೆ ಭಾರತೀಯನಿಗೂ ತುಂಬಾ ಸಂತೋಷ ತಂದಿದೆ. ಅವರ ಭವಿಷ್ಯದ ಪ್ರಯತ್ನಗಳಿಗೆ ನಾನು ಅವರಿಗೆ ಶುಭ ಹಾರೈಸುತ್ತೇನೆ’ ಎಂದು ತಿಳಿಸಿದ್ದಾರೆ.

ಶನಿವಾರ ನಡೆದ ಮಹಿಳೆಯರ 55 ಕೆಜಿ ವೇಟ್‌ಲಿಫ್ಟಿಂಗ್‌ನಲ್ಲಿ ಬಿಂದ್ಯಾರಾಣಿ ದೇವಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಅವರು ಒಟ್ಟು 202 ಕೆಜಿ ಭಾರ ಎತ್ತುವ ಮೂಲಕ ಈ ಸಾಧನೆಗೈದಿದ್ದರು.