Sunday, September 20, 2026

BDA Apartments

ಉದ್ಯಮಿ ಬಿಲ್ ಗೇಟ್ಸ್ ಜೊತೆ ‘ನಮೋ’ ಸಂವಾದ: ‘ನಮೋ ಡ್ರೋನ್ ದೀದಿ’ ಯೋಜನೆ ಬಗ್ಗೆ ...
Home Front Page ಉದ್ಯಮಿ ಬಿಲ್ ಗೇಟ್ಸ್ ಜೊತೆ ‘ನಮೋ’ ಸಂವಾದ: ‘ನಮೋ ಡ್ರೋನ್ ದೀದಿ’ ಯೋಜನೆ ಬಗ್ಗೆ ಪ್ರಸ್ತಾಪ.

ಉದ್ಯಮಿ ಬಿಲ್ ಗೇಟ್ಸ್ ಜೊತೆ ‘ನಮೋ’ ಸಂವಾದ: ‘ನಮೋ ಡ್ರೋನ್ ದೀದಿ’ ಯೋಜನೆ ಬಗ್ಗೆ ಪ್ರಸ್ತಾಪ.

ನವದೆಹಲಿ, ಮಾರ್ಚ್​ 29,2024 (www.justkannada.in): ಪ್ರಧಾನಿ ನರೇಂದ್ರ ಮೋದಿ ಅವರು ಖ್ಯಾತ ಉದ್ಯಮಿ, ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಅವರ ಜತೆ ಸಂವಾದ ನಡೆಸಿದ್ದು ಈ ವೇಳೆ : ‘ನಮೋ ಡ್ರೋನ್ ದೀದಿ’ ಯೋಜನೆ ಬಗ್ಗೆ ಪ್ರಸ್ತಾಪಿಸಿದರು.

ಭಾರತದಲ್ಲಿ ಮಹಿಳೆಯರು ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವಲ್ಲಿ ಮುಕ್ತರಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಗ್ರಾಮೀಣ ಭಾರತದಲ್ಲಿ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಸ್ಥಾಪಿಸುವ ಮಹತ್ವಾಕಾಂಕ್ಷೆಯನ್ನು ಮೋದಿ ವ್ಯಕ್ತಪಡಿಸಿದರು.

ಬಿಲ್ ಗೇಟ್ಸ್ ಜೊತೆಗಿನ ಸಂವಾದದ ಬಗ್ಗೆ ಟ್ವಿಟ್ಟರ್ ನಲ್ಲಿ ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ. ಬಿಲ್​ ಗೇಟ್ಸ್ ಜತೆಗೆ ಒಳನೋಟವುಳ್ಳ ಒಂದು ಸಂವಾದ. ದಯವಿಟ್ಟು ನೋಡಿ ಎಂದು ಮೋದಿ ಉಲ್ಲೇಖಿಸಿದ್ದಾರೆ.

ಸಂವಾದದಲ್ಲಿ ಕೃತಕ ಬುದ್ಧಿಮತ್ತೆ (AI) ಕುರಿತು ಮಾತನಾಡಿದ ಪ್ರಧಾನಿ ಮೋದಿ, ಎಐ ಜಾಗತಿಕವಾಗಿ ಸಾಕಷ್ಟು ಸವಾಲುಗಳನ್ನು ಸೃಷ್ಟಿಸುತ್ತಿದೆ. ಜತೆಗೆ ಎಐ ವ್ಯವಸ್ಥೆಗಳಿಗೆ ಸಮಗ್ರ ತರಬೇತಿಯ ಪ್ರಾಮುಖ್ಯತೆಯನ್ನು ಒತ್ತಿಹೇಳಿದರು. ಅಲ್ಲದೆ, ಎಐಯಿಂದ ರಚಿತವಾದುದಕ್ಕೆ ವಾಟರ್‌ಮಾರ್ಕ್ ಸೇರಿಸುವ ಕಲ್ಪನೆಯನ್ನು ಪ್ರಸ್ತಾಪಿಸಿದರು.ಉದ್ಯಮಿ ಬಿಲ್ ಗೇಟ್ಸ್ ಜೊತೆ ‘ನಮೋ’ ಸಂವಾದ modi-bilgats modi bilgats

ಭಾರತದಲ್ಲಿ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಮಹಿಳೆಯರು ಹೆಚ್ಚು ಮುಕ್ತರಾಗಿದ್ದಾರೆ. ನಾನು ‘ನಮೋ ಡ್ರೋನ್ ದೀದಿ’ ಯೋಜನೆಯನ್ನು ಪ್ರಾರಂಭಿಸಿದ್ದೇನೆ. ಇದು ಅತ್ಯಂತ ಯಶಸ್ವಿಯಾಗಿ ಮನ್ನಡೆಯುತ್ತಿದೆ. ಈ ಬಗ್ಗೆ ಮಹಿಳೆಯರ ಜತೆ ಸಂವಹನ ನಡೆಸಿದ್ದೇನೆ, ಅವರು ಸಂತೋಷಪಡುತ್ತಾರೆ. ಈ ಹಿಂದೆ ಸೈಕಲ್ ತುಳಿಯುವುದೇ ಕಷ್ಟ ಎನ್ನುತ್ತಿದ್ದ ಮಹಿಳೆಯರು ಈಗ ಪೈಲಟ್‌ ಗಳು ಮತ್ತು ಡ್ರೋನ್‌ಗಳನ್ನು ಹಾರಿಸಬಲ್ಲರು. ಭಾರತದಲ್ಲಿ ಮನಃಸ್ಥಿತಿ ಬದಲಾಗಿದೆ  ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

Key words:  PM Modi, conversation, Bill Gates