ಬೇರೆ ದೇಶಗಳೊಂದಿಗೆ ಒಳ್ಳೆಯ ಬಾಂಧವ್ಯ ಇಟ್ಟುಕೊಳ್ಳುವಲ್ಲಿ ಪ್ರಧಾನಿ ಮೋದಿ ವಿಫಲ-ಡಿ.ಕೆ ಸುರೇಶ್

ಬೆಂಗಳೂರು,ಮಾರ್ಚ್,14,2026 (www.justkannada.in): ಬೇರೆ ದೇಶಗಳೊಂದಿಗೆ ಒಳ್ಳೆಯ ಬಾಂಧವ್ಯ ಇಟ್ಟುಕೊಳ್ಳುವಲ್ಲಿ ಪ್ರಧಾನಿ ಮೋದಿ ವಿಫಲರಾಗಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಸುರೇಶ್ ಕಿಡಿಕಾರಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಹಿನ್ನೆಲೆಯಲ್ಲಿ ಈ ಕುರಿತು ಮಾತನಾಡಿದ ಡಿ.ಕೆ ಸುರೇಶ್, ಯುದ್ದದಿಂದ ಸಾಕಷ್ಟು ಸಮಸ್ಯೆ ಆಗುತ್ತಿದೆ. ನಮ್ಮ ಮೇಲೂ ಅದರ ಪರಿಣಾಮ ಆಗುತ್ತಿರುವುದನ್ನ ನೋಡುತ್ತಿದ್ದೇವೆ.

ಬೇರೆ ದೇಶಗಳ ಜೊತೆ ಮೋದಿ ಒಳ್ಳೆಯ ಬಾಂಧವ್ಯ ಇಟ್ಟುಕೊಳ್ಳಬೇಕು. ಆದರೆ  ಒಳ್ಳೆಯ ಬಾಂಧವ್ಯ ಇಟ್ಟುಕೊಳ್ಳುವಲ್ಲಿ ಮೋದಿ ವಿಫಲರಾಗಿದ್ದಾರೆ. ಪ್ರಧಾನಿ ಮೋದಿ, ಪ್ರಹ್ಲಾದ್ ಜೋಶೀ ಕಡಿಮೆ ಬೆಲೆಗೆ ತೈಲ ನೀಡಿಲ್ಲ. ಆರೋಪ ಪ್ರತ್ಯಾರೋಪ ಮಾಡಬೇಡಿ ಎಂದು ಡಿಕೆ ಸುರೇಶ್ ವಾಗ್ದಾಳಿ ನಡೆಸಿದರು.

Key words:  PM Modi, failed, good relations, other countries, D.K. Suresh