ಹಾಸನ, ಸೆಪ್ಟೆಂಬರ್, 13,2025 (www.justkannada.in): ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ ಗಣಪತಿ ಮೆರವಣಿಗೆ ವೇಳೆ ಟ್ರಕ್ ಹರಿದು ವಿದ್ಯಾರ್ಥಿಗಳು ಸೇರಿ 9 ಜನರು ಸಾವನ್ನಪ್ಪಿದ್ದು ಮೃತರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿ ಪರಿಹಾರ ಘೋಷಣೆ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಹಾಸನದಲ್ಲಿ ನಡೆದ ದುರಂತ ಇದೊಂದು ಹೃದಯವಿದ್ರಾವಕ ಘಟನೆ. ದುಃಖಗೊಂಡಿರುವ ಕುಟುಂಬಗಳಲ್ಲಿ ನಾನು ಭಾಗಿಯಾಗಿದ್ದೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
ಹಾಗೆಯೇ ಪಿಎಂ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರಿಗೆ ತಲಾ 2 ಲಕ್ಷ ರೂ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
Key words: PM Modi, condoles, Hassan, Truck accident,