ಐಐಎಸ್ ಸಿಯಲ್ಲಿ ಮಿದುಳು ಸಂಶೋಧನಬಾ ಕೇಂದ್ರ ಉದ್ಘಾಟಿಸಿದ ಪ್ರಧಾನಿ ಮೋದಿ.

ಬೆಂಗಳೂರು,ಜೂನ್,20,2022(www.justkannada.in): ರಾಜ್ಯದಲ್ಲಿ ಎರಡು ದಿನಗಳ ಕಾಲ ಪ್ರವಾಸಕ್ಕಾಗಿ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಐಐಎಸ್ ಸಿಗೆ ಭೇಟಿ ನೀಡಿ ಮಿದುಳು ಸಂಶೋಧನಬಾ ಕೇಂದ್ರವನ್ನ ಉದ್ಘಾಟಿಸಿದರು.

ಇಂದು ಬೆಂಗಳೂರಿನ ಯಲಹಂಕ ವಾಯುನೆಲೆಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ IIScಗೆ ತೆರಳಿ ನ ಮೆದುಳು ಸಂಶೋಧನಾ ಕೇಂದ್ರ  ಉದ್ಘಾಟಸಿದ್ದಾರೆ ಮತ್ತು ಬಾಗ್ಚಿ ಪಾರ್ಥಸಾರಥಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

280 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಮಿದುಳು ಸಂಶೋಧನಾ ಕೇಂದ್ರಕ್ಕೆ  2015 ಫೆಬ್ರವರಿ 18 ರಂದು ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದರು ಎನ್ನಲಾಗಿದೆ.  ಐಐಎಸ್ ಸಿ ಸಿಬ್ಬಂದಿ ಜೊತೆ ಮೋದಿ ಸಮಾಲೋಚನೆ ನಡೆಸಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ದಾನಿಗಳಾದ ಕ್ರಿಸ್ ಗೋಪಾಲಕೃಷ್ಣನ್ ದಂಪತಿ ಹಾಗೂ ಬಾಗ್ಚಿ ಮತ್ತು ಪಾರ್ಥಸಾರಥಿ ಕುಟುಂಬದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Key words: PM Modi- inaugurated Brain Research Center -IISC