Saturday, October 10, 2026

BDA Apartments

Increase in COVID cases: DC’s village stay program with held BDA JK_Adv BDA Adv
Home Front Page ಉತ್ತರ ಪ್ರದೇಶದ ಕುಶಿನಗರ ಅಂತಾರಾಷ್ಟ್ರೀಯ ಏರ್ ಪೋರ್ಟ್ ಉದ್ಘಾಟಿಸಿದ ಪ್ರಧಾನಿ ಮೋದಿ.  

ಉತ್ತರ ಪ್ರದೇಶದ ಕುಶಿನಗರ ಅಂತಾರಾಷ್ಟ್ರೀಯ ಏರ್ ಪೋರ್ಟ್ ಉದ್ಘಾಟಿಸಿದ ಪ್ರಧಾನಿ ಮೋದಿ.  

ನವದೆಹಲಿ,ಅಕ್ಟೋಬರ್,20,2021(www.justkannada.in):  ಉತ್ತರ ಪ್ರದೇಶದ ಕುಶಿನಗರದಲ್ಲಿ ನಿರ್ಮಾಣವಾಗಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಿದರು.

ವಿಮಾನ ನಿಲ್ದಾಣ ಉದ್ಘಾಟಿಸಿದ ಬಳಿಕ ಮಾತನಾಡಿರುವ ಪ್ರಧಾನಿ  ಮೋದಿ, ಕುಶಿನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಕೇವಲ ವಾಯು ಸಂಪರ್ಕವಷ್ಟೇ ಅಲ್ಲ, ರೈತರು, ಪಶು ಪಾಲಕರು, ಅಂಗಡಿಯವರು, ಕಾರ್ಮಿಕರು, ಸ್ಥಳೀಯ ಕೈಗಾರಿಕೋದ್ಯಮಿಗಳು ಸೇರಿದಂತೆ ಎಲ್ಲರಿಗೂ ಪ್ರಯೋಜನವನ್ನು ನೀಡುತ್ತದೆ. ವ್ಯಾಪಾರದ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸುತ್ತದೆ. ಪ್ರವಾಸೋದ್ಯಮವು ಗರಿಷ್ಠ ಲಾಭವನ್ನು ಪಡೆಯುತ್ತದೆ, ಅಲ್ಲದೆ, ಇಲ್ಲಿನ ಯುವಕರಿಗೆ ಉದ್ಯೋಗವನ್ನು ಸೃಷ್ಟಿಸುತ್ತದೆ  ಎಂದು ತಿಳಿಸಿದರು.

ಕುಶಿನಗರ ವಿಮಾನ ನಿಲ್ದಾಣವನ್ನು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಘೋಷಿಸಲು ಪ್ರಧಾನಿ ಮೋದಿ ಅಧ್ಯಕ್ಷತೆಯ ಕೇಂದ್ರ ಸಂಪುಟ ಜೂನ್ 2020 ರಲ್ಲಿ ಅನುಮೋದನೆ ನೀಡಿತ್ತು. ಕುಶಿನಗರ ವಿಮಾನ ನಿಲ್ದಾಣವು ಶ್ರಾವಸ್ತಿ, ಕಪಿಲ್ವಾಸ್ತು, ಲುಂಬಿನಿ ನಂತಹ ಹಲವಾರು ಬೌದ್ಧ ಸಾಂಸ್ಕೃತಿಕ ತಾಣಗಳ ಹತ್ತಿದಲ್ಲಿದೆ.

Key words: PM Modi- inaugurated -Kushinagar -International Airport – Uttar Pradesh.