ನಾಳೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಸಾಧ್ಯತೆ

ನವದೆಹಲಿ, ಮೇ 01, 2020 (www.justkannada.in): ನಾಳೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ.

ಮೇ. 3 ರಂದು ಲಾಕ್ ಡೌನ್ ಮುಕ್ತಾಯವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ದೇಶದ ಜನರನ್ನು ಉದ್ದೇಶಿಸಿ ನಾಳೆ ಬೆಳಗ್ಗೆ ಇಲ್ಲವೇ ಸಂಜೆ ಮಾತನಾಡಲಿದ್ದು, ಮತ್ತೊಂದು ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಪ್ರಧಾನಿ ಮೋದಿ ದೇಶದ ಎಲ್ಲಾ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದ್ದು, ಲಾಕ್ ಡೌನ್ ಮುಂದುವರೆಸುವ ಕುರಿತು ತೀರ್ಮಾನ ಕೈಗೊಳ್ಳುವ ಸಲಹೆ ನೀಡಿದ್ದಾರೆ ಎನ್ನಲಾಗಿದೆ.