ಕೊರೋನಾ ನಿರ್ವಹಣೆ ಕುರಿತು ಸಿಎಂಗಳ ಜತೆ ಪ್ರಧಾನಿ ಮೋದಿ ಸಭೆ: ಸಿಎಂ ಬೊಮ್ಮಾಯಿ ಭಾಗಿ.

0
3

ಬೆಂಗಳೂರು,ಜನವರಿ,13,2022(www.justkannada.in): ದೇಶದಲ್ಲಿ ಕೊರೋನಾ 3ನೇ ಅಲೆ ಮತ್ತು ಒಮಿಕ್ರಾನ್ ಹೆಚ್ಚುತ್ತಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಭೆ ನಡೆಸುತ್ತಿದ್ದಾರೆ.

ಕೊರೋನಾ ನಿರ್ವಹಣೆ ಕುರಿತು ವರ್ಚೂವಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸುತ್ತಿದ್ದು ರಾಜ್ಯದಿಂದ ಸಿಎಂ ಬಸವರಾಜ ಬೊಮ್ಮಾಯಿ ಗೃಹ ಸಚಿವ ಅರಗ ಜ್ಞಾನೇಂದ್ರ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಉನ್ನತ ಶಿಕ್ಷಣ ಸಚಿವ ಅಶ್ವತ್ ನಾರಾಯಣ್ ರಾಜ್ಯ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಡಿಜಿ ಐಜಿಪಿ ಪ್ರವೀಣ್ ಸೂದ್, ಆರೋಗ್ಯ ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದಾರೆ.

ಕೋವಿಡ್ ನಿರ್ವಹಣೆಗೆ ಕೈಗೊಂಡ ಕ್ರಮಗಳ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡುತ್ತಿದ್ದಾರೆ. ವಿಕೇಂಡ್ ಕರ್ಫ್ಯೂ, ನೈಟ್ ಕರ್ಫ್ಯೂ  ಮುಂತಾದ ಬಿಗಿ ಕ್ರಮಗಳ ಕುರಿತು ವಿವರಣೆ ನೀಡಲಿದ್ದಾರೆ.

Key words: PM Modi-meeting – CMs-Corona