Friday, September 18, 2026

BDA Apartments

Home Front Page ಇಂದು ಮೈಸೂರಿಗೆ ಪ್ರಧಾನಿ ಮೋದಿ ಆಗಮನ:  ಹೆಲಿಪ್ಯಾಡ್ ತಪಾಸಣೆ, ಖಾಕಿ ಸರ್ಪಗಾವಲು

ಇಂದು ಮೈಸೂರಿಗೆ ಪ್ರಧಾನಿ ಮೋದಿ ಆಗಮನ:  ಹೆಲಿಪ್ಯಾಡ್ ತಪಾಸಣೆ, ಖಾಕಿ ಸರ್ಪಗಾವಲು

ಮೈಸೂರು,ಆಗಸ್ಟ್,1,2026 (www.justkannada.in):  ಇಂದು ಪ್ರಧಾನಿ ನರೇಂದ್ರ ಮೋದಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಲಿದ್ದು ಈ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ನಗರದ ರಾಮಕೃಷ್ಣ ಆಶ್ರಮದಲ್ಲಿ ನೂತನವಾಗಿ ನಿರ್ಮಿಸಲಾದ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ (ವಿವೇಕ ಸ್ಮಾರಕ)ವನ್ನು ಇಂದು ಪ್ರಧಾನಿ ಮೋದಿ  ಉದ್ಘಾಟಿಸಲಿದ್ದಾರೆ. 1892ರಲ್ಲಿ ಸ್ವಾಮಿ ವಿವೇಕಾನಂದರು ಮೈಸೂರಿನಲ್ಲಿ ತಂಗಿದ್ದ ಐತಿಹಾಸಿಕ ಘಟನೆಯನ್ನು ಸ್ಮರಿಸುವ ಉದ್ದೇಶದಿಂದ ಈ ಸ್ಮಾರಕವನ್ನು ನಿರ್ಮಿಸಲಾಗಿದೆ.ಇಂದು ಮೈಸೂರಿಗೆ ಪ್ರಧಾನಿ ಮೋದಿ ಆಗಮನ modi

ಮಧ್ಯಾಹ್ನ 2.55ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ  ಆಗಮಿಸಲಿದ್ದು, ಅಲ್ಲಿಂದ ಸೇನಾ ಹೆಲಿಕಾಪ್ಟರ್ ಮೂಲಕ ಓವಲ್ ಮೈದಾನಕ್ಕೆ ತೆರಳಲಿದ್ದು,  ಬಳಿಕ ರಸ್ತೆ ಮಾರ್ಗವಾಗಿ ರಾಮಕೃಷ್ಣ ಆಶ್ರಮಕ್ಕೆ ಆಗಮಿಸಿ ವಿವೇಕ ಸ್ಮಾರಕವನ್ನು ಉದ್ಘಾಟಿಸಲಿದ್ದಾರೆ. ಇದಾದ ಬಳಿಕ  ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ನಂತರ ರಾಮಕೃಷ್ಣ ಆಶ್ರಮ ಶಾಲೆಗೆ ಭೇಟಿ ನೀಡಿ, ಸಂಜೆ ವೇಳೆಗೆ ನವದೆಹಲಿಗೆ  ತೆರಳಲಿದ್ದಾರೆ.ಹೆಲಿಪ್ಯಾಡ್ ತಪಾಸಣೆ jk02_new jk02 new

ಪ್ರಧಾನಿ ಮೋದಿ ಆಗಮನ ಹಿನ್ನೆಲೆಯಲ್ಲಿ  ಓವೆಲ್ ಮೈದಾನದಲ್ಲಿ ಖಾಕಿ ಸರ್ಪಗಾವಲು ಹಾಕಲಾಗಿದ್ದು  ಮೋದಿ ಬಂದಿಳಿಯುವ  ಹೆಲಿಪ್ಯಡ್  ಅನ್ನು ಶ್ವಾನದಳ ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ ನಡೆಸಲಾಗುತ್ತಿದೆ.

Key words: PM Modi, Mysuru,  today, Helipad, inspected,