ಫೆ.27 ರಂದು ಶಿವಮೊಗ್ಗಕ್ಕೆ ಪ್ರಧಾನಿ ಮೋದಿ: ನನ್ನ ಬಹಳ ವರ್ಷದ ಕನಸು ನನಸಾಗಿದೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

ಬೆಂಗಳೂರು,ಫೆಬ್ರವರಿ,25,2023(www.justkannada.in): ವಿಮಾನ ನಿಲ್ದಾಣ ಉದ್ಘಾಟನೆ ಫೆಬ್ರವರಿ 27 ರಂದು ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿದ್ದು, ನನ್ನ ಬಹಳ ವರ್ಷದ ಕನಸು ನನಸಾಗಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿಶ್ ಶಾ ನೇತೃತ್ವದಿಂದ ನಮಗೆ ಆನೆ ಬಲ‌ ಸಿಕ್ಕಿದಂತಾಗಿದೆ. ಫೆಬ್ರವರಿ 27ರಂದು ಶಿವಮೊಗ್ಗಕ್ಕೆ ಮೋದಿ ಬರುತ್ತಾರೆ. ನನ್ನ ಬಹಳ ವರ್ಷದ ಕನಸು ನನಸಾಗಿದೆ. ಅಭಿವೃದ್ಧಿಗೆ ಏನೆಲ್ಲ ಮಾಡಬೇಕೋ ಅದನ್ನೆಲ್ಲ ಮಾಡಿದ್ದೇನೆಂಬ ತೃಪ್ತಿ ಇದೆ. ರಾಜ್ಯ ಪ್ರವಾಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುವೆ. ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ. ಮನೆಯಲ್ಲಿ ಸುಮ್ಮನೇ ಕೂರುವ ಪ್ರಶ್ನೆಯೇ ಇಲ್ಲ ಎಂದರು.

ವೀರಶೈವ ‌ಲಿಂಗಾಯತ ಬಂಧುಗಳಲ್ಲಿ ಕೈ ಜೋಡಿಸಿ ಮನವಿ ಮಾಡುತ್ತಿದ್ದೇನೆ. ನಾನೇ ಸ್ವಯಂ ‌ಪ್ರೇರಿತವಾಗಿ ನಿವೃತ್ತಿಯಾಗುತ್ತಿದ್ದೇನೆ. ನನಗೆ ಬೆಂಬಲ ಕೊಟ್ಟು ಬಿಜೆಪಿ ಗೆಲ್ಲಿಸಬೇಕೆಂದು ಕೈಜೋಡಿಸಿ ಪ್ರಾರ್ಥನೆ ಮಾಡುತ್ತೇನೆ ಎಂದು ಬಿಎಸ್ ವೈ ಮನವಿ ಮಾಡಿದರು.

ಸಿದ್ದರಾಮಯ್ಯ ಮೇಲೆ ರೀಡೂ ಅಕ್ರಮ ಆರೋಪದ ವಿಚಾರಕ್ಕೆ ಸಂಬಂಧಿಸಿದಂತೆ  ಪ್ರತಿಕ್ರಿಯಿಸಿದ  ಬಿಎಸ್ ವೈ, ಅದಕ್ಕೆ ಮುಖ್ಯಮಂತ್ರಿಗಳು ಉತ್ತರ ಕೊಡುತ್ತಾರೆ. ಅನಗತ್ಯವಾಗಿ ಒಂದು ವಿಚಾರದ ಬಗ್ಗೆ ಮಾತನಾಡುವುದಿಲ್ಲ ಎಂದರು.

Key words: PM-Modi – Shimoga – February 27-Former CM- BS Yeddyurappa