ಕುರುಬರನ್ನು ಎಸ್ ಟಿಗೆ ಸೇರಿಸಿದರೆ ಮೋದಿಗೆ ಬೆಂಬಲ ಹೇಳಿಕೆ ವಿಚಾರ: ಕುರುಬ ಸಮುದಾಯದ ಸ್ವಾಮೀಜಿಗೆ ಟಾಂಗ್ ನೀಡಿದ ಸಿದ್ಧರಾಮಯ್ಯ….

ಮೈಸೂರು,ಫೆಬ್ರವರಿ,9,2021(www.justkannada.in): ಕುರುಬರನ್ನು ಎಸ್ ಟಿಗೆ ಸೇರಿಸಿದರೆ ಪ್ರಧಾನಿ ಮೋದಿಗೆ ಬೆಂಬಲ ನೀಡುವುದಾಗಿ ಹೇಳಿಕೆ ನೀಡಿದ್ದ ಕುರುಬ ಸಮುದಾಯದ ಸ್ವಾಮೀಜಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ಟಾಂಗ್ ನೀಡಿದ್ದಾರೆ.jk

ಇದು ಯಾರೋ ಒಬ್ಬರು ಮಾಡುವ ತೀರ್ಮಾನವಲ್ಲ. ಯಾವುದೋ ಸಭೆ ಸಮಾರಂಭದಲ್ಲಿ ಆಗುವ ತೀರ್ಮಾನ ಅಲ್ಲ. ಚುನಾವಣೆಯಲ್ಲಿ ಜನರು ತೀರ್ಮಾನ ಮಾಡುತ್ತಾರೆ. ಯಾರ ಪರ ಯಾರ ವಿರೋಧ ಅನ್ನೋದು ಜನರು ತೀರ್ಪು ಎಂದು ಕುರುಬ ಸಮುದಾಯದ ಸ್ವಾಮೀಜಿಗೆ ಸಿದ್ದರಾಮಯ್ಯ ಟಾಂಗ್ ನೀಡಿದರು.sheep-five-rupees-former-cm-siddaramaiah-old-time-reliever-suttur-math

ಮೈಸೂರಿನ ಸುತ್ತೂರಿನಲ್ಲಿ ಮಾತನಾಢಿದ ಮಾಜಿ ಸಿಎಂ ಸಿದ್ಧರಾಮಯ್ಯ, ರಾಜ್ಯದಲ್ಲಿ ಹಿಂದುಳಿದವರು ದಲಿತರು ಅಲ್ಪಸಂಖ್ಯಾತರಿಗೆ ಅನ್ಯಾವಾದರೆ ರಸ್ತೆಗಿಳಿದು ಹೋರಾಟ ಮಾಡಲಾಗುತ್ತದೆ.  ಕೇಂದ್ರ ರಾಜ್ಯ ಬಿಜೆಪಿ ಸರ್ಕಾರಗಳು ಮೀಸಲಾತಿ ವಿರುದ್ದ ಇವೆ‌. ಖಾಸಗೀಕರಣದ ಹೆಸರಿನಲ್ಲಿ ಮೀಸಲಾತಿ ಕಿತ್ತುಕೊಳ್ಳುತ್ತಿವೆ. ಅಂತಹ ಪರಿಸ್ಥಿತಿ ಬಂದರೆ ಅಹಿಂದ ಪರವಾಗಿ ಹೋರಾಟ ಮಾಡುತ್ತೇವೆ. ಕುರುಬರಿರಲಿ ಅಥವಾ ಯಾರೇ ಇರಲಿ ಅವರಿಗೆ ಸಂವಿಧಾನಾತ್ಮಕವಾಗಿ ಮೀಸಲಾತಿ ಸಿಗುವುದಿದ್ದರೆ ಸಿಗಲಿ. ನಾನು ಕುರುಬರನ್ನು ಎಸ್ ಟಿ ಸೇರಿಸುವುದಕ್ಕೆ ವಿರೋಧ ಇಲ್ಲ ಎಂದರು.

Key words: pm Modi -support –kuruba community-added- ST-former cm-Siddaramaiah