ಜೂ.20ರಿಂದ ಎರಡು ದಿನಗಳ ಕಾಲ ಪ್ರಧಾನಿ ಮೋದಿ ರಾಜ್ಯ ಪ್ರವಾಸ: ಕಾರ್ಯಕ್ರಮಗಳ ಸಂಭವನೀಯ ಪಟ್ಟಿ ಬಿಡುಗಡೆ.

ಮೈಸೂರು,ಜೂನ್,17,2022(www.justkannada.in):  ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗದಿನಾಚರಣೆ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಅವರು ಪಾಲ್ಗೊಳ್ಳುವ ಕಾರ್ಯಕ್ರಮಗಳ ಸಂಭವನೀಯ ಪಟ್ಟಿ ಬಿಡುಗಡೆಯಾಗಿದೆ.

ಪ್ರಧಾನಿ ನರೇಂದ್ರ  ಮೋದಿ ಅವರು ಜೂನ್ 20 ಮತ್ತು 21 ಎರಡು ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಬೆಂಗಳೂರು ಮತ್ತು ಮೈಸೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಜೂ.20 ಮಧ್ಯಾಹ್ನ 12ಕ್ಕೆ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಆಗಮಿಸಲಿರುವ ಪ್ರಧಾನಿ ಮೋದಿ, 12:30ಕ್ಕೆ ಬೆಂಗಳೂರು ಸಬರ್ಬನ್ ರೈಲು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮ.2:30ಕ್ಕೆ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟಿಸಲಿದ್ದು ಸಂಜೆ 3:50ಕ್ಕೆ ಬೆಂಗಳೂರಿನಿಂದ ಮೈಸೂರಿಗೆ ಹೆಲಿಕಾಪ್ಟರ್‌ ನಲ್ಲಿ ಪ್ರಯಾಣ ಬೆಳೆಸಲಿದ್ದಾರೆ.

ಸಂಜೆ4:50ಕ್ಕೆ ಮೈಸೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ ಸಂಜೆ 5ಕ್ಕೆ ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ಆಗಮಿಸಿ ಕೇಂದ್ರ ಯೋಜನಗೆಳ ಫಲಾನುವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಬಳಿಕ ಸಂಜೆ 6:30 ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದು, ಸುತ್ತೂರು ಮಠದ ಆವರಣದಲ್ಲಿ ವೇದ ಪಾಠಶಾಲೆ ಕಟ್ಟಡ ಲೋಕಾರ್ಪಣೆ ಮಾಡಲಿದ್ದಾರೆ.

ರಾತ್ರಿ 7:30ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪ್ರಯಾಣ ಬೆಳೆಸಿ  ನಾಡದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ರ್ಯಾಡಿಷನ್ ಬ್ಲೂ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಲಿರುವ ಪ್ರಧಾನಿ ಮೋದಿ ಜೂನ್ 21 ಬೆಳಿಗ್ಗೆ 6.30ಕ್ಕೆ ಮೈಸೂರು ಅರಮನೆ ಆವರಣಕ್ಕೆ ಆಗಮಿಸಿ ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗಿಯಾಗಲಿದ್ದಾರೆ. ಸ್ವತಃ ಯೋಗಾಭ್ಯಾಸ ಮಾಡಲಿರುವ ಪ್ರಧಾನಿ‌ ಮೋದಿ ಅಂತರಾಷ್ಟ್ರೀಯ ಯೋಗದಿನದ ಕುರಿತು ಸಂದೇಶ ಸಾರಲಿದ್ದಾರೆ. ಬಳಿಕ ಬೆ 9:25ಕ್ಕೆ ಮೈಸೂರಿನಿಂದ ತಿರುವನಂತಪುರಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

Key words: PM Modi – tour- state – two days-mysore-yogaday