Monday, October 19, 2026

Dasara Wishes

Happy Dasara
Home Front Page ಕನ್ನಡ ಹಾಡಿಗೆ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ ಪ್ರಧಾನಿ ಮೋದಿ.

ಕನ್ನಡ ಹಾಡಿಗೆ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ ಪ್ರಧಾನಿ ಮೋದಿ.

ಬೆಂಗಳೂರು, ಜನವರಿ,16,2024(www.justkannada.in):  ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್  ಅವರು ಯೂಟ್ಯೂಬ್ ​ನಲ್ಲಿ ಹಾಡಿರುವ, ‘ಪೂಜಿಸಲೆಂದೇ ಹೂಗಳ ತಂದೆ’ ಹಾಡಿನ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಈ ಹಾಡಿನ ಲಿಂಕ್​ ಅನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರಮೋದಿ, ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಿ ಮುಂದೆ ಕೊಂಡೊಯ್ಯುತ್ತವೆ ಎಂದು  ಹೇಳಿದ್ದಾರೆ.

ಕನ್ನಡದಲ್ಲಿ ಶಿವಶ್ರೀ ಸ್ಕಂದ ಪ್ರಸಾದ್ ಅವರ ಈ ನಿರೂಪಣೆಯು ಪ್ರಭು ಶ್ರೀರಾಮನ ಭಕ್ತಿಯ ಭಾವವನ್ನು ಸುಂದರವಾಗಿ ಎತ್ತಿ ತೋರಿಸುತ್ತದೆ. ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವಲ್ಲಿ ಬಹಳ ದೂರ ಸಾಗುತ್ತವೆ ಎಂದು ಪ್ರಧಾನಿ ಮೋದಿ ನುಡಿದ್ದಾರೆ.ಕನ್ನಡ ಹಾಡಿಗೆ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ ಪ್ರಧಾನಿ ಮೋದಿ MODI MODI 1

ಪೂಜಿಸಲೆಂದೆ ಹೂಗಳ ತಂದೆ’ ಹಾಡು ಮೂಲತಃ ದೊರೈ-ಭಗವಾನ್ ಜೋಡಿಯಿಂದ ನಿರ್ದೇಶಿಸಲ್ಪಟ್ಟ ರಾಜ್‌ಕುಮಾರ್ ನಟನೆಯ ‘ಎರಡು ಕನಸು’ ಸಿನಿಮಾದ ಹಾಡು. ಈ ಸಿನಿಮಾ 1974 ರಲ್ಲಿ ಈ ಸಿನಿಮಾ ತೆರೆ ಕಂಡಿತ್ತು. ಇದೀಗ ಅದೇ ಹಾಡನ್ನು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಭಾವನಾತ್ಮಕವಾಗಿ ಹಾಡಿ ಯೂಟ್ಯೂಬ್​ ನಲ್ಲಿ ಪ್ರಕಟಿಸಿದ್ದರು.

Key words:  PM –Modi- tweeted – appreciation – Kannada song.