ಇಂದು ಪ್ರಧಾನಿ ಮೋದಿ ಭೇಟಿ ಹಿನ್ನೆಲೆ: ತುಮಕೂರಿನಲ್ಲಿ ಪೊಲೀಸ್ ಬಿಗಿ ಭದ್ರತೆ….

ತುಮಕೂರು,ಜ,2,2020(www.justkannada.in):  ಇಂದು ಪ್ರಧಾನಿ ನರೇಂದ್ರ ಮೋದಿ ಕಲ್ಪತರ ನಾಡು ತುಮಕೂರಿಗೆ ಭೇಟಿ ನೀಡಲಿದ್ದು ಈ ಹಿನ್ನೆಲೆ ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

ಇಂದು ಮಧ್ಯಾಹ್ನ 2 .15ಕ್ಕೆ ತುಮಕೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರಶ್ರೀಗಳ ಗದ್ದುಗೆ ದರ್ಶನ ಪಡೆಯಲಿದ್ದಾರೆ. ಬಳಿಕ ಶಿವಕುಮಾರ ಶ್ರೀಗಳ ವಸ್ತುಸಂಗ್ರಹಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿ ವಿದ್ಯಾರ್ಥಿಗಳ ಜತೆ ಸಂವಾದ ನಡೆಸಲಿದ್ದಾರೆ. ಬಳಿಕ ಸರ್ಕಾರ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುವ ಕಿಸಾನ್ ಸಮ್ಮಾನ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇನ್ನು ತುಮಕೂರಿನಾದ್ಯಂತ ಬಿಗಿ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದೆ. 2500ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ನಾಲ್ವರು ಎಸ್ ಪಿ, 200 ಸಬ್ ಇನ್ಸ್ ಪೆಕ್ಟರ್ ನಿಯೋಜಿಸಲಾಗಿದ್ದು ಬೆಂಗಳೂರು, ಮೈಸೂರು, ಮಂಗಳೂರಿನಿಂದ ಪೊಲೀಸ್ ಸಿಬ್ಬಂದಿ ಕರೆಸಿಕೊಳ್ಳಲಾಗಿದೆ.  ರಸ್ತೆ ಇಕ್ಕೆಲಗಳಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದ್ದು ಪ್ರತಿಯೊಬ್ಬರನ್ನ ತಪಾಸಣೆ ಮಾಡಲಾಗುತ್ತಿದೆ.

Key words: PM Modi- visit-tumkur- today- Police- tight security