ಉಡುಪಿ,ನವೆಂಬರ್,27,2025 (www.justkannada.in): ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದು ಸಕಲ ಸಿದ್ದತೆ ನಡೆಸಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನ ಸ್ವಾಗತಿಸಲು ನಗರ ಸಂಪೂರ್ಣವಾಗಿ ಸಜ್ಜಾಗಿದೆ. ಪ್ರಧಾನಿಯವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುವ ಮುನ್ನ ರೋಡ್ ಶೋ ನಡೆಸಲಿದ್ದಾರೆ. ಆದಿ ಉಡುಪಿ ಹೆಲಿಪ್ಯಾಡ್ ನಿಂದ ನಾರಾಯಣ ಗುರು ಸರ್ಕಲ್ ವರೆಗೆ ಪ್ರಧಾನಿ ಮೋದಿ ರ್ಯಾಲಿ ನಡೆಸಲಿದ್ದು ಸುಮಾರು 30 ಸಾವಿರ ಅಭಿಮಾನಿಗಳು ಸೇರುವ ನಿರೀಕ್ಷೆ ಇದೆ.
ಸಾರ್ವಜನಿಕರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ವೀಕ್ಷಿಸಲು ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದೆ. ಈ ರೋಡ್ ಶೋ ಮಾರ್ಗದಲ್ಲಿ ಬಂಟಿಂಗ್ಸ್ ಮತ್ತು ಕೇಸರಿ ಪತಾಕೆಗಳನ್ನು ಹಾಕಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು 3000ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳನ್ನು ಉಡುಪಿ ನಗರದ ಸುತ್ತಮುತ್ತ ನಿಯೋಜಿಸಲಾಗಿದೆ.
Key words: PM Modi, visit, Udupi, tomorrow, Tight security







