ನಾಳೆ ಪ್ರಧಾನಿ ಮೋದಿ ತುಮಕೂರಿಗೆ ಭೇಟಿ ಹಿನ್ನೆಲೆ: ಎರಡು ಕಾಲೇಜುಗಳಿಗೆ ರಜೆ ಘೋಷಣೆ…

ತುಮಕೂರು,ಜ,1,2020(www.justkannada.in):  ನಾಳೆ ಪ್ರಧಾನಿ ನರೇಂದ್ರ ಮೋದಿ ತುಮಕೂರಿಗೆ ಭೇಟಿ ನೀಡಲಿದ್ದು ಈ ಹಿನ್ನೆಲೆ ಇಲ್ಲಿನ ಎರಡು ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

ಸರ್ಕಾರಿ ಜ್ಯೂನಿಯರ್ ಕಾಲೇಜು ಮತ್ತು ಎಂಪ್ರೆಸ್ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ನಾಳೆ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆಯಲಿದ್ದಾರೆ. ಬಳಿಕ ಶಿವಕುಮಾರ ಶ್ರೀಗಳ ವಸ್ತು ಸಂಗ್ರಹಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಇದಾದ ಬಳಿಕ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗುವ ಕಿಸಾನ್ ಸಮ್ಮಾನ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆ ಭದ್ರತಾ ದೃಷ್ಠಿಯಿಂದ ಸರ್ಕಾರಿ ಜ್ಯೂನಿಯರ್ ಕಾಲೇಜು ಮತ್ತು ಎಂಪ್ರೆಸ್ ಕಾಲೇಜಿಗೆ ರಜೆ ಘೋಷಿಸಲಾಗಿದೆ.

key words: PM Modi –visits- Tumkur- tomorrow-Declaration – leave -two colleges.