ತೆಲಂಗಾಣ ನೂತನ ಸಿಎಂ ರೇವಂತ್ ರೆಡ್ಡಿಗೆ ಶುಭಕೋರಿದ ಪ್ರಧಾನಿ ಮೋದಿ.

ನವದೆಹಲಿ,ಡಿಸೆಂಬರ್,7,2023(www.justkannada.in): ತೆಲಂಗಾಣ ನೂತನ ಸಿಎಂ ಆಗಿ ಪ್ರಮಾಣ ವಚನಸ್ವೀಕರಿಸಿದ  ರೇವಂತ್ ರೆಡ್ಡಿಗೆ  ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ  ಮೋದಿ, ತೆಲಂಗಾಣದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ರೇವಂತ್ ರೆಡ್ಡಿ ಅವರಿಗೆ ಅಭಿನಂದನೆಗಳು. ರಾಜ್ಯದ ಪ್ರಗತಿ ಮತ್ತು ಅಲ್ಲಿನ ನಾಗರಿಕರ ಕಲ್ಯಾಣಕ್ಕಾಗಿ ನಾನು ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುತ್ತೇನೆ ಎಂದು ತಿಳಿಸಿದ್ದಾರೆ.

ಹೈದರಾಬಾದ್‌ನ ಎಲ್ ಬಿ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ತೆಲಂಗಾಣ ನೂತನ ಸಿಎಂ ಆಗಿ ರೇವಂತ್ ರೆಡ್ಡಿ ಮತ್ತು ಓರ್ವ ಡಿಸಿಎಂ ಆಗಿ ಹಾಗೂ 11 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

Key words:  PM Modi -wished – new CM – Telangana- Revanth Reddy.