Friday, August 21, 2026

BDA Apartments

Home Front Page ಸಿಎಂ ಬಸವರಾಜ ಬೊಮ್ಮಾಯಿಗೆ ಹುಟ್ಟುಹಬ್ಬದ ಶುಭಕೋರಿದ ಪ್ರಧಾನಿ ಮೋದಿ

ಸಿಎಂ ಬಸವರಾಜ ಬೊಮ್ಮಾಯಿಗೆ ಹುಟ್ಟುಹಬ್ಬದ ಶುಭಕೋರಿದ ಪ್ರಧಾನಿ ಮೋದಿ

ಬೆಂಗಳೂರು, ಜನವರಿ 28, 2021 (www.justkannada.in): ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ 62 ನೇ ಹುಟ್ಟುಹಬ್ಬದ ಸಂಭ್ರಮ.

ಜನ್ಮ ದಿನದ ಸಂಭ್ರಮದಲ್ಲಿರುವ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.

ಇಂದು ಟ್ವಿಟ್ಟರ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮೋದಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

ಕರ್ನಾಟಕದ ಸಿಎಂ ಬಸವರಾಜ ಅವರಿಗೆ ಹುಟ್ಟುಹಬ್ಬದ ಶುಭ ಹಾರೈಕೆಗಳು ಬೊಮ್ಮಾಯಿ ಅವರು ಕರ್ನಾಟಕದ ಬೆಳವಣಿಗೆಯ ಪಥವನ್ನು ಹೆಚ್ಚಿಸಲು ಮತ್ತು ಬಡವರ ಪರ ಅವರು ಅತ್ಯುತ್ತಮ ಯೋಜನೆಗಳನ್ನು ಮಾಡುತ್ತಿದ್ದಾರೆ ಎಂದು ಟ್ವಿಟ್ಟರ್ ನಲ್ಲಿ ಮೆಚ್ಚುಗೆಯ ನುಡಿಗಳನ್ನಾಡಿದ್ದಾರೆ.