ಇಂದು ಯಾದಗಿರಿ ಮತ್ತು ಕಲ್ಬುರ್ಗಿಗೆ ಪ್ರಧಾನಿ ಮೋದಿ.

ಯಾದಗಿರಿ,ಜನವರಿ,19,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ  ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಕಲ್ಯಾಣ ಕರ್ನಾಟಕ್ಕೆ ಆಗಮಿಸುತ್ತಿದ್ದಾರೆ.

ಯಾದಗಿರಿ ಮತ್ತು ಕಲ್ಬುರ್ಗಿ ಜಿಲ್ಲೆಯಲ್ಲಿ ಪ್ರಧಾನಿ ಮೋದಿ ಪ್ರವಾಸ ಕೈಗೊಂಡಿದ್ದು, ಕಾರ್ಯಕ್ರಮಕ್ಕೆ ಯಾದಗಿರಿ ಕಲ್ಬುರ್ಗಿ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ . ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮಕ್ಕೆ ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಪಿಎಂ ಮೋದಿ ಆಗಮಿಸಲಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ. ಬಳಿಕ ಕಲಬುರ್ಗಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಕೊಡೆಕಲ್ ನಲ್ಲಿ ನಿರ್ಮಾಣ ಮಾಡಿರುವ ಹೆಲಿಫ್ಯಾಡ್ ಗೆ ಬಂದಿಳಿಯಲಿದ್ದಾರೆ.

ಮೋದಿ ಜೊತೆಗೆ ರಾಜ್ಯದ ರಾಜಪಾಲರು, ಸಿಎಂ ಬಸವರಾಜ ಬೊಮ್ಮಾಯಿ, ಸೇರಿದಂತೆ ಕೇಂದ್ರ ಹಾಗೂ ರಾಜ್ಯದ ಹಲವು ಜನ ಸಚಿವರು ಹಾಗೂ ಶಾಸಕರು ಬರಲಿದ್ದಾರೆ. ಮೋದಿ ಕಾರ್ಯಕ್ರಮಕ್ಕಾಗಿ ಕೊಡೆಕಲ್ ಗ್ರಾಮದಲ್ಲಿ ಭವ್ಯವಾದ ವೇದಿಕೆಯನ್ನ ನಿರ್ಮಾಣ ಮಾಡಲಾಗಿದೆ.

Key words: PM Modi -Yadagiri – Kalburgi -today.