ಬೆಂಗಳೂರು,ಆಗಸ್ಟ್,9,2025 (www.justkannada.in): ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ, ಹಳದಿ ಮೆಟ್ರೋ ಮಾರ್ಗ ಉದ್ಘಾಟನೆ ಮಾಡಲು ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ.
ನಾಳೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸುವ ಪ್ರಧಾನಿ ಮೋದಿ ಹೆಲಿಕಾಪ್ಟರ್ ಮೂಲಕ ಮೇಖ್ರಿ ವೃತ್ತದ ಬಳಿಯಿರುವ ಎಚ್‌ಕ್ಯುಟಿಸಿ ಕೇಂದ್ರಕ್ಕೆ ಬರಲಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ 11.15ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೇಲ್ವೆ ನಿಲ್ದಾಣಕ್ಕೆ ಆಗಮಿಸಿ ಬೆಂಗಳೂರು-ಬೆಳಗಾವಿ ಮಾರ್ಗದ್ದೂ ಸೇರಿ ಒಟ್ಟು ದೇಶದಲ್ಲಿ ಹೊಸ ಮೂರು ವಂದೇ ಭಾರತ್ ರೈಲುಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.
ನಂತರ 11.45ಕ್ಕೆ ಆರ್.ವಿ.ರಸ್ತೆಯ ರಾಗೀಗುಡ್ಡ ಮೆಟ್ರೋ ನಿಲ್ದಾಣದಲ್ಲಿ ನೂತನ ಹಳದಿ ಮಾರ್ಗಕ್ಕೆ ಚಾಲನೆ ನೀಡಿ ಅದೇ ರೈಲಿನಲ್ಲಿ ಎಲೆಕ್ಟ್ರಾನಿಕ್ ಸಿಟಿಗೆ ಪ್ರಯಾಣಿಸಲಿದ್ದಾರೆ. 12.55ಕ್ಕೆ ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಕೇಂದ್ರದ ಸಭಾಂಗಣಕ್ಕೆ ಆಗಮಿಸಿ ಸುಮಾರು ಒಂದು ಗಂಟೆ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಧಾನಿ ಮೋದಿ ಜೊತೆ 9 ನಾಯಕರಿಗೆ ಅವಕಾಶ ನೀಡಲಾಗಿದೆ. ರಾಜ್ಯಪಾಲ ಥಾವರ್ ಚಂದ್ರ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಮನೋಹರ್ ಲಾಲ್ ಖಟ್ಟರ್ , ಅಶ್ವಿನಿ ವೈಷ್ಣವ್, ಹೆಚ್ ಡಿ ಕುಮಾರಸ್ವಾಮಿ, ವಿ ಸೋಮಣ್ಣ ಶೋಭಾ ಕರಂದ್ಲಾಜೆ ಡಿಸಿಎಂ ಡಿಕೆ ಶಿವಕುಮಾರ್ ಸಂಸದ ತೇಜಸ್ವಿ ಸೂರ್ಯ, ಬಿವೈ ವಿಜಯೇಂದ್ರಗೆ ವೇದಿಕೆಯಲ್ಲಿ ಅವಕಾಶ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Key words: PM, Narendra Modi, Bengaluru, tomorrow