Sunday, August 23, 2026

BDA Apartments

Home Front Page ಇಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ: ರೋಡ್ ಶೋ ಹಿನ್ನೆಲೆ ಕೆಲ ರಸ್ತೆಗಳಲ್ಲಿ ವಾಹನ ಸಂಚಾರ...

ಇಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ: ರೋಡ್ ಶೋ ಹಿನ್ನೆಲೆ ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ.

ಬೆಂಗಳೂರು,ಏಪ್ರಿಲ್,29,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆಗೆ  ದಿನಗಣನೆ ಆರಂಭವಾಗಿದ್ದು ಚುನಾವಣ ಕಣ ರಂಗೇರಿದೆ. ಈ ಮಧ್ಯೆ ಇಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಲಿದ್ದು ರೋಡ್ ಶೋ ನಡೆಸಲಿದ್ದಾರೆ.

ನೈಸ್​ ರಸ್ತೆಯಿಂದ ಸುಮ್ಮನಹಳ್ಳಿ ಜಂಕ್ಷನ್​ ವರೆಗೆ  ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಲಿದ್ದಾರೆ. ಹೀಗಾಗಿ ಹೆಜ್ಜೆ ಹೆಜ್ಜೆಗೂ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದ್ದು ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಮಾಗಡಿ ರಸ್ತೆಯ ನೈಸ್​ ಜಂಕ್ಷನ್​ನಿಂದ ಸುಮನಹಳ್ಳಿ ಸರ್ಕಲ್​​ವರೆಗೂ ನರೇಂದ್ರ ಮೋದಿ ರೋಡ್​ ಶೋ ನಡೆಸಲಿದ್ದಾರೆ. ರೋಡ್​ ಶೋ ನಡೆಯುವ ಸುತ್ತಮುತ್ತಲ ರಸ್ತೆಯಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ. ಇಂದು ಮಧ್ಯಾಹ್ನ 2ರಿಂದ ಸಂಜೆ 7.30ರವರೆಗೆ ಸಂಚಾರ ನಿರ್ಬಂಧಿಸಲಾಗಿದೆ.

ಓಲ್ಡ್ ಏರ್‌ಪೋರ್ಟ್ ರಸ್ತೆ, ಕಬ್ಬನ್ ರಸ್ತೆ, ಅಂಬೇಡ್ಕರ್ ರಸ್ತೆ, ಕೃಂಬಿಗಲ್ ರಸ್ತೆ, ದೇವಾಂಗ ರಸ್ತೆ, ಕೇಂಬ್ರಿಡ್ಜ್ ಲೇಔಟ್ ರಸ್ತೆ, ಡಿಕನ್‌ ಸನ್ ರಸ್ತೆ, ಲಾಲ್‌ ಬಾಗ್ ವೆಸ್ಟ್ ಗೇಟ್ ರಸ್ತೆ, ಕೆ.ಆರ್.ಸರ್ಕಲ್, ಆರ್.ವಿ.ಕಾಲೇಜ್ ರಸ್ತೆ, ಲಾಲ್‌ಬಾಗ್‌ ಮುಖ್ಯ ರಸ್ತೆ, ಬಸನವಗುಡಿ 50 ಅಡಿ ರಸ್ತೆ, ಕೆನರಾ ಬ್ಯಾಂಕ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

Key words: PM Narendra Modi – Bangalore -today- Road show