ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಮೈಸೂರು ಪ್ರವಾಸ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ.

ಮೈಸೂರು,ಏಪ್ರಿಲ್,8,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯದಕ್ಕೆ ಪದೇ ಪದೇ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನಗಳ ಕಾಲ ಮೈಸೂರು ಪ್ರವಾಸ ಕೈಗೊಂಡಿದ್ದಾರೆ.

ಇಂದು ಮತ್ತು ನಾಳೆ ಪ್ರಧಾನಿ ನರೇಂದ್ರ ಮೋದಿ ಮೈಸೂರು ಪ್ರವಾಸ ಕೈಗೊಂಡಿದ್ದಾರೆ. ಈವರೆಗೆ ಒಟ್ಟು 7 ಬಾರಿ‌ಗೆ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದು 4ನೇ ಬಾರಿ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಇಂದು ರಾತ್ರಿ 8.45ಕ್ಕೆ‌ ಚೆನೈನಿಂದ ಮೈಸೂರು ಮಂಡಕಳ್ಳಿ‌ ವಿಮಾನ ನಿಲ್ದಾಣಕ್ಕೆ‌ ಆಗಮಿಸಲಿರುವ ಪ್ರಧಾನಿ ಮೋದಿ.  ರ್ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಏಪ್ರಿಲ್ 9 ಬೆಳಿಗ್ಗೆ 6.20 ಮೈಸೂರು ವಿಶೇಷ ಹೆಲಿಪ್ಯಾಡ್‌ ನಿಂದ ಚಾಮರಾಜನಗರದ ಮೇಲುಕಾಮನಹಳ್ಳಿ ಹೆಲಿಪ್ಯಾಡ್‌ ಗೆ ಪ್ರಯಣ ಬೆಳಸಲಿರುವ ಪ್ರಧಾನಿ ನರೇಂದ್ರ ಮೋದಿ ಬೆಳಿಗ್ಗೆ 7.15ಕ್ಕೆ ಬಂಡೀಪುರಕ್ಕೆ ಭೇಟಿ ನೀಡಿ ಸಫಾರಿ ನಡೆಸಲಿದ್ದಾರೆ.

ಬಳಿಕ ನೀಲಗಿರೀಸ್‌ಗೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಿ ನೀಲಗಿರಿಯಲ್ಲಿ ಆನೆ ಶಿಬಿರಕ್ಕೆ ಭೇಟಿ ನೀಡಿ ಸುಮಾರು 2 ಗಂಟೆಗಳ ಕಾಲ ಅರಣ್ಯದಲ್ಲಿ ಕಾಲ ಕಳೆಯಲಿದ್ದಾರೆ.  ಬಳಿಕ ನೀಲಗಿರಿಯಿಂದ ಮೈಸೂರಿನ ಕೆಎಸ್ಒಯುನ ತಾತ್ಕಾಲಿಕ ಹೆಲಿಪ್ಯಾಡ್‌ ಗೆ ಬೆಳಗ್ಗೆ 11ಕ್ಕೆ ಆಗಮಿಸಲಿದ್ದಾರೆ.

ಕೆಎಸ್ಒಯುನ ಘಟಿಕೋತ್ಸವ ಭವನದಲ್ಲಿ ನಡೆಯುವ ಬಂಡೀಪುರ ಹುಲಿ ಯೋಜನೆ 50 ವರ್ಷದ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ, ಇತ್ತೀಚಿನ ಹುಲಿಗಣತಿ ವರದಿ, ಹುಲಿಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿ, ನಾಣ್ಯ ಸ್ಮರಣಿಕೆ ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ ಹೇರಲಾಗಿದೆ.

ಇದಾದ ಬಳಿಕ ಮಧ್ಯಾಹ್ನ 12.10ಕ್ಕೆ  ಹೆಲಿಕಾಪ್ಟರ್ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಿ 12.40ಕ್ಕೆ ದೆಹಲಿಗೆ ವಾಪಸ್ ಆಗಲಿದ್ದಾರೆ. ಮೈಸೂರಿಗೆ ಪ್ರಧಾನಿ ಮೋದಿ ಆಗಮನ ಹಿನ್ನಲೆ, ಮೋದಿ ಸಂಚರಿಸುವ ರಸ್ತೆಗಳಲ್ಲಿ ಬಿಗಿ ಪೋಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.  ಮುಕ್ತ ವಿವಿ ಘಟಿಕೋತ್ಸವ ಸುತ್ತ ಪೋಲೀಸ್ ಸರ್ಪಗಾವಲು ಹಾಕಲಾಗಿದೆ.

Key words: PM-Narendra Modi – visit -Mysore – two days