ಲೋಕಸಭೆ ಚುನಾವಣೆ ಗೆಲ್ಲಲು ಟೆಂಪಲ್ ರನ್: ಕೇದಾರನಾಥ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ ವಿಶೇಷ ಪೂಜೆ ಸಲ್ಲಿಕೆ…

ಉತ್ತರಖಂಡ್,ಮೇ,18,2019(www.justkannada.in): ಲೋಕಸಭಾ ಚುನಾವಣೆಗೆ ಅಂತಿಮ ಹಂತದ ಚುನಾವಣೆ ಬಾಕಿ ಇರುವ ಮೊದಲೇ ಪ್ರಧಾನಿ ನರೇಂದ್ರ ಮೋದಿ  ಉತ್ತರಾಖಂಡ್ ನಲ್ಲಿರುವ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

 ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಕಾಲ ಉತ್ತರಾಖಂಡ್ ರಾಜ್ಯ ಪ್ರವಾಸದಲ್ಲಿದ್ದು, ಇಂದು ಬೆಳಗ್ಗೆ ಕೇದಾರನಾಥ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.  ನಾಳೆ ಪ್ರಧಾನಿ ಮೋದಿ ಅವರು ಬದರಿನಾಥಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಲೋಕಸಭಾ ಚುನಾವಣೆಯ ಅಂತಿಮ ಹಾಗೂ 7ನೇ ಹಂತದ ಚುನಾವಣೆ ನಾಳೆ ನಡೆಯಲಿದ್ದು, ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಪವಿತ್ರ ಕೇದಾರನಾಥ್ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕೇದಾರನಾಥನ ಸನ್ನಿಧಿಯಲ್ಲಿ ಸ್ವಲ್ಪ ಹೊತ್ತು ಧ್ಯಾನಸ್ಥರಾಗಿದ್ದು, ಬಳಿಕ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Key words: PM Narendra Modi visit to Kedarnatha temple , spcial worship

#Politicalnews #pmnarendramodi #kedaranathatemple