ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ: 2ನೇ ಆರೋಪಿ ಹಾಸ್ಟೆಲ್ ಮಹಿಳಾ ವಾರ್ಡನ್ ಬಂಧನ.

ಚಿತ್ರದುರ್ಗ,ಸೆಪ್ಟಂಬರ್,2,2022(www.justkannada.in): ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯ , ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಬಂಧನ  ಬಳಿಕ ಇದೀಗ  ಆರೋಪಿ 2 ಆಗಿರುವ ಲೇಡಿ ವಾರ್ಡನ್  ಬಂಧನವಾಗಿದೆ.

ಚಿತ್ರದುರ್ಗ ಪೊಲೀಸರು ನಿನ್ನೆ ಮಹಿಳಾ ವಾರ್ಡನ್  ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.  ಇಂದು ಬಂಧಿಸಿ ವೈದ್ಯಕೀಯ ತಪಾಸಣೆಗೆ ಕರೆದುಕೊಂಡು ಹೋಗಿದ್ದಾರೆ.  ಮುರುಘಾಶ್ರೀ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಬಂಧನವಾಗಿದೆ.Twist-bullet –missing- case –mysore- T.Narasipur-police station-Arrest -Constable.

ಸ್ವಾಮೀಜಿ ಅವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್​ ಹೇಳುತ್ತಿದ್ದರು ಎಂದು ಸಂತ್ರಸ್ತ ಬಾಲಕಿಯರು ವಿಚಾರಣೆಯಲ್ಲಿ ಆರೋಪ ಮಾಡಿದ್ದಾರೆ.

ಇನ್ನು  ಮಾಜಿ ಶಾಸಕ ಎಸ್.ಕೆ.ಬಸವರಾಜನ್ ವಿರುದ್ಧ ​​ಅತ್ಯಾಚಾರಕ್ಕೆ ಯತ್ನ, ಹಿಂಸೆ ನೀಡಿದ್ದಾರೆಂದು ಆರೋಪಿಸಿ ಹಾಸ್ಟೆಲ್​​ನ ಮಹಿಳಾ ವಾರ್ಡನ್  ದೂರು ನೀಡಿದ್ದರು. ಈ ಕುರಿತು ಎಸ್.ಕೆ.ಬಸವರಾಜನ್ ವಿರುದ್ಧ ಪ್ರಕರಣ ದಾಖಲಾಗಿದೆ. ಬಸವರಾಜನ್ ಹಾಗೂ ಪತ್ನಿ ಸೌಭಾಗ್ಯ ಬಸವರಾಜನ್ ಗೆ ನಿನ್ನೆ ಜಾಮೀನು ಸಿಕ್ಕಿದೆ.

Key words: POCSO-case -against -Muruga Shri-2nd -accused -hostel -warden -arrested.