ಮುರುಘಾಮಠದ ಶ್ರೀಗಳ ಪೋಕ್ಸೋ ಪ್ರಕರಣ: ತನಿಖೆಯಿಂದ ಸತ್ಯ ಹೊರಗೆ ಬರಲಿದೆ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು, ಆಗಸ್ಟ್ 28, 2022 (www.justkannada.in): ಮುರುಘಾಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣದ ವಿಚಾರ ತನಿಖೆ ಬಳಿಕ ಸತ್ಯ ಹೊರಬಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮುರುಘ ಶ್ರೀಗಳ ವಿರುದ್ಧ ಪೋಕ್ಸೋ ಮತ್ತು ಕಿಡ್ನಾಪ್ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಎರಡೂ ಪ್ರಕರಣಗಳ ತನಿಖೆ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ತನಿಖೆ ದೃಷ್ಟಿಯಿಂದ ಈ ಮಾತನಾಡಲು ಆಗಲ್ಲ. ತನಿಖೆ ಬಳಿಕ ಸತ್ಯ ಹೊರಬಲಿದೆ ಎಂದು ಹೇಳಿದ್ದಾರೆ. ಮುರುಘಾಮಠದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ ಇಬ್ಬರು ಬಾಲಕಿಯರು ಮೈಸೂರಿನಿಂದ ಚಿತ್ರದುರ್ಗಕ್ಕೆ ಶಿಫ್ಟ್ ಮಡಲಾಗಿದೆ.

ಪೊಲೀಸರ ಭದ್ರತೆಯಲ್ಲಿ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಇಬ್ಬರು ಬಾಲಕಿಯರನ್ನು ಮೈಸೂರಿನಿಂದ ಚಿತ್ರದುರ್ಗಕ್ಕೆ ಶಿಫ್ಟ್ ಮಾಡಲಾಗಿದೆ. ಸದ್ಯ ಇಬ್ಬರು ಬಾಲಕಿಯರು ಬಾಲಭವನದಲ್ಲಿದ್ದಾರೆ. ಇಂದು ಜಡ್ಜ್ ಎದುರು ಹೇಳಿಕೆ ನೀಡುವ ಸಾಧ್ಯತೆ ಇದೆ.