ಬಿಎಸ್ ವೈ ವಿರುದ್ದ ಪೋಕ್ಸೋ ಪ್ರಕರಣ: ಹೈಕೋರ್ಟ್ ನಿಂದ ಸರ್ಕಾರಕ್ಕೆ ಕಪಾಳಮೋಕ್ಷ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ, ಜೂನ್ 15,2024 (www.justkannada.in): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್  ಕಪಾಳ‌ಮೋಕ್ಷ ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ  ಟಾಂಗ್ ಕೊಟ್ಟರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  ಬಿಎಸ್ ಯಡಿಯೂರಪ್ಪ ನಮ್ಮ ಪಕ್ಷದ ಹಿರಿಯ ನಾಯಕರು. ಸಂಸದೀಯ ಮಂಡಳಿ ಮೆಂಬರ್ ಆಗಿ ದೆಹಲಿಯಲ್ಲಿ ಇರುವುದು ಸಹಜ. ಅವರಿಗೆ ಜಾಮೀನು ರಹಿತ ವಾರೆಂಟ್ ಹೊರಡಿಸಿದ್ದು ತಪ್ಪು ಎಂದು ನ್ಯಾಯಾಲಯವೇ ಹೇಳಿದೆ. ರಾಜ್ಯ ಸರ್ಕಾರವೇ ಇದರ ಸೂತ್ರಧಾರಿ. ಮೊದಲೇ ನೋಟಿಸ್ ಕೊಟ್ಟು, ಲೋಕಸಭಾ ಚುನಾವಣೆ ಮುಗಿದು ನಮ್ಮ ಸರ್ಕಾರ ಬಂದಿರುವ ಸಮಯದಲ್ಲಿ ಹೀಗೆ ಮಾಡಿದ್ದಾರೆ ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಖುರ್ಚಿ ಉಳಿಸಿಕೊಳ್ಳಲು ಯಡಿಯೂರಪ್ಪರನ್ನು ಬಂಧಿಸುವ‌ ಮೂಲಕ ಸೇಡಿನ ರಾಜಕಾರಣಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿತ್ತು. ಆದರೆ, ದೇಶದಲ್ಲಿ ನ್ಯಾಯಾಂಗ ವ್ಯವಸ್ಥೆ ಬಲವಾಗಿದೆ ಎಂದು ಪ್ರಹ್ಲಾದ್  ಜೋಶಿ ತಿಳಿಸಿದರು.

Key words: POCSO case, BSY,  government, Pralhad Joshi