ಬಿಎಸ್  ವೈ ವಿರುದ್ದ ಪೋಕ್ಸೋ ಕೇಸ್:  ಇದರಲ್ಲಿ ಯಾವುದೇ ರಾಜಕೀಯ ಮಾಡಿಲ್ಲ- ಸಚಿವ ಎಂ.ಬಿ ಪಾಟೀಲ್

ಹುಬ್ಬಳ್ಳಿ, ಜೂನ್,14,2024 (www.justkannada.in): ಮಾಜಿ ಸಿಎಂ ಬಿಎಸ್  ಯಡಿಯೂರಪ್ಪ ವಿರುದ್ದ ಪೋಕ್ಸೋ ಪ್ರಕರಣದಲ್ಲಿ ವಾರೆಂಟ್ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಇದರಲ್ಲಿ ಯಾವುದೇ ರಾಜಕೀಯ ಮಾಡಿಲ್ಲ ಎಂದು ಬೃಹತ್ ಕೈಗಾರಿಕೆ  ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ಈ ಕುರಿತು ಮಾತನಾಡಿದ ಸಚಿವ ಎಂ.ಬಿ ಪಾಟೀಲ್,  ಪೋಕ್ಸೋ ಪ್ರಕ್ರರಣ ಅತ್ಯಂತ ಸೂಕ್ಷ ಹಾಗೂ ಗಂಭೀರವಾಗಿದ್ದು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾನೂನು ಇದರಲ್ಲಿ ಯಾವುದೇ ರಾಜಕೀಯ ಮಾಡುತ್ತಿಲ್ಲ. ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಏನಾದರೂ ಅಹಿತಕರ ಘಟನೆಗಳು ನಡೆದರೆ ಇದು ಪೋಕ್ಸೋ ಕಾಯ್ದೆ ವ್ಯಾಪ್ತಿಗೆ ಬರುತ್ತದೆ. ಇದರಲ್ಲಿ ಯಾವುದೇ ಸರ್ಕಾರ ಹಾಗೂ ಪಕ್ಷ ಹಸ್ತಕ್ಷೇಪ ಮಾಡಲು ಬರುವುದಿಲ್ಲ ಎಂದರು.

ಮೂರು ಡಿಸಿಎಂ ಹುದ್ದೆ ಸೃಷ್ಠಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಎಂ.ಬಿ ಪಾಟೀಲ್, ಇದು ಪಕ್ಷದ ಆಂತರಿಕ ವಿಚಾರ ಪಕ್ಷದ ವೇದಿಕೆಯಲ್ಲಿ ಮಾತನಾಡುವೆ ಎಂದರು.

ಇನ್ನು ಲೋಕಸಭಾ ಚುನಾವಣೆಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಸೋಲಾಗಿದ್ದು, ಕೆಲವರು ತೆಲೆದಂಡ ಆಗುತ್ತದೆ ಎಂಬುದು ಕೇವಲ ಊಹಾಪೋಹವಷ್ಟೇ ಎಂದರು.

Key words: POCSO, case, BSY, No politics, MB Patil