ಪೋಕ್ಸೋ ಪ್ರಕರಣ: ಮುರುಘ ಶ್ರೀ ಮತ್ತೆ ಅರೆಸ್ಟ್.

ದಾವಣಗೆರೆ, ನವೆಂಬರ್, 20,2023(www.justkannada.in): ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ  ಮುರುಘ ಶ್ರೀ ಮತ್ತೆ  ಬಂಧನವಾಗಿದೆ.

2ನೇ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗೆ ಬಂಧನ ವಾರೆಂಟ್ ಜಾರಿ ಮಾಡಿ ಚಿತ್ರದುರ್ಗ  2ನೇ ಅಪರ  ಜಿಲ್ಲಾ ಮತ್ತು ಸತ್ರ ನ್ಯಾಯಾಲಯ  ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಮುರುಘ ಶ್ರೀ ಮತ್ತೆ ಅರೆಸ್ಟ್ ಆಗಿದ್ದಾರೆ.

ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ನ್ಯಾಯಾಲಯ ಜಾರಿ ಮಾಡಿದ ಅರೆಸ್ಟ್ ವಾರೆಂಟ್ ಮೇರೆಗೆ ಮುರುಘಾಶ್ರಿಯನ್ನು ಬಂಧಿಸಿದ್ದಾರೆ. ಇಂದು ಕೋರ್ಟ್ ಅರೆಸ್ಟ್​ ವಾರೆಂಟ್ ಆದೇಶದ ಪ್ರತಿಪಡೆದುಕೊಂಡ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ನೇರವಾಗಿ ದಾವಣಗೆರೆಯ ವಿರಕ್ತ ಮಠಕ್ಕೆ ತೆರಳಿ ಮುರುಘಾಶ್ರೀಗಳನ್ನು ಬಂಧಿಸಿದ್ದಾರೆ.

ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಜಾಮೀನು ಪಡೆದು ಮುರುಘಾಶ್ರೀ ನವೆಂಬರ್ 16ರಂದು  ಜೈಲಿನಿಂದ ಬಿಡುಗಡೆಯಾಗಿದ್ದರು. ಆದರೆ ಇದೀಗ ನಾಲ್ಕೇ ದಿನದಲ್ಲಿ ಮತ್ತೆ ಬಂಧನವಾಗಿದೆ.

Key words: POCSO- case- Muruga Shr–arrested -again.