ಪೋಕ್ಸೋ ಪ್ರಕರಣ: ಮುರುಘಾ ಶ್ರೀಗೆ ಎದುರಾಯ್ತು ಮತ್ತೆ ಸಂಕಷ್ಟ.

ಚಿತ್ರದುರ್ಗ,ನವೆಂಬರ್,20,2023(www.justkannada.in): 1ನೇ ಪೋಕ್ಸೋ ಪ್ರಕರಣದಲ್ಲಿ ಷರತ್ತುಬದ್ದ ಜಾಮೀನು ಪಡೆದು ನಾಲ್ಕು ದಿನಗಳಿಂದ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದ ಮುರುಘಾ ಶ್ರೀಗೆ ಮತ್ತೆ ಸಂಕಷ್ಟ ಎದುರಾಗಿದೆ.

ಹೌದು 2ನೇ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗೆ ಬಂಧನ ವಾರೆಂಟ್ ಜಾರಿ ಮಾಡಿ ಚಿತ್ರದುರ್ಗ  2ನೇ ಅಪರ  ಜಿಲ್ಲಾ ಮತ್ತು ಸತ್ರ ನ್ಯಾಯಾಲಯ  ಆದೇಶ ಹೊರಡಿಸಿದೆ. ಈ ಮೂಲಕ ಜೈಲಿನಿಂದ ಬಿಡುಗಡೆಯಾದ ನಾಲ್ಕೇ ದಿನದಲ್ಲಿ ಮುರುಘಾ ಶ್ರೀಗೆ ಮತ್ತೆ ಬಂಧನದ ಭೀತಿ ಎದುರಾಗಿದೆ.

Key words: POCSO case- Muruga Sri– arrest- warrant