ಬೆಳಗಾವಿಯಲ್ಲಿ ಶಾಸಕರ ಕಚೇರಿ ಮೇಲೆ ಕಲ್ಲು ತೂರಾಟ

ಬೆಂಗಳೂರು, ಫೆಬ್ರವರಿ 14, 2022 (www.justkannada.in):  ಬಿಜೆಪಿ ಶಾಸಕ ಅನಿಲ್​ ಬೆನಕೆ ಕಚೇರಿ ಮೇಲೆ ಕಲ್ಲು ತೂರಾಟ ನಡೆದಿರುವ ಪ್ರಕರಣ ಕುಂದಾನಗರಿ ಬೆಳಗಾವಿಯಲ್ಲಿ ನಡೆದಿದೆ.

ಅನಿಲ್ ಬೆನಕೆ, ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ. ನಗರದ ಚವ್ಹಾಟ್ ಗಲ್ಲಿಯಲ್ಲಿರುವ ಕಚೇರಿಯ ಮೇಲೆ ಕಲ್ಲು ತೂರಾಟ ನಡೆದಿದೆ.

ಕಲ್ಲೆಸೆತ ಪರಿಣಾಮ ಶಾಸಕರ ಕಚೇರಿಯ ಗಾಜು ಪುಡಿ ಪುಡಿಯಾಗಿದೆ.

ಕಲ್ಲು ತೂರಾಟ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಆತಂಕದ ವಾತಾವರಣ ಮನೆ ಮಾಡಿದೆ. ತಕ್ಷಣ ಸ್ಥಳಕ್ಕೆ ಭೇಟಿ‌ ನೀಡಿದ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

ಪಾನಮತ್ತ ಯುವಕನೊಬ್ಬ ಕಲ್ಲು ತೂರಾಟ ನಡೆದಿದೆ ಎಂಬ ಮಾಹಿತಿ ಇದೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.