Sunday, October 18, 2026

Dasara Wishes

Happy Dasara
Home Crime ರಾಮನಗರ ಜಿಲ್ಲೆಯಲ್ಲಿ ರೌಡಿಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ

ರಾಮನಗರ ಜಿಲ್ಲೆಯಲ್ಲಿ ರೌಡಿಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ

ರಾಮನಗರ, ಆಗಸ್ಟ್ 16, 2020 (www.justkannada.in): ರಾಮನಗರ ಜಿಲ್ಲೆಯ ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ರೌಡಿಶೀಟರ್ ಗಳ ಮನೆ ಮೇಲೆ ದಿಢೀರ್ ಪೊಲೀಸರು ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದ ಗಲಭೆಯ ನಂತರ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.

ಮಾಗಡಿ ಹಾಗೂ ಕುದೂರು ಮತ್ತು ತಾವರೆಕೆರೆ ರೌಡಿಶೀಟರ್ ಗಳನ್ನು ಮಾಗಡಿ ಪೊಲೀಸ್ ಠಾಣೆಗೆ ಕರೆತಂದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ರೌಡಿಶೀಟರ್ ಮನೆ ಮೇಲೆ ದಾಳಿ ನಡೆಸಿ, ಮನೆಯಲ್ಲಿದ್ದ ಆಯುಧಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಮಾಗಡಿ ಸರ್ಕಲ್ ಇನ್ಸ್ ಪೆಕ್ಟರ್ ಬಿ.ಎಸ್ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.