ಮೈಸೂರಿನಲ್ಲಿ ಪೊಲೀಸ್ ಕಾನ್ಸ್ ಟೇಬಲ್ ನೇಣಿಗೆ ಶರಣು.

ಮೈಸೂರು,ಮೇ,28,2022(www.justkannada.in): ಪೊಲೀಸ್ ಕಾನ್ಸಟೇಬಲ್ ನೇಣಿಗೆ ಶರಣಾಗಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.

ನಗರದ ಜಲಪುರಿ ಪೊಲೀಸ್ ವಸತಿಗೃಹದಲ್ಲಿ ಘಟನೆ ನಡೆದಿದೆ. ಪರಸಪ್ಪ ಕೊನ್ನೂರು (27) ನೇಣಿಗೆ ಶರಣಾದ ಪೊಲೀಸ್ ಕಾನ್ಸ್ ಟೇಬಲ್, ಮೈಸೂರಿನ ದೇವರಾಜ ಠಾಣೆಯಲ್ಲಿ ಪರಸಪ್ಪ ಕೊನ್ನೂರು ಕಾನ್ಸಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಉತ್ತರ ಕರ್ನಾಟಕ  ಮೂಲದ ಪರಸಪ್ಪ ಕೊನ್ನೂರು 2016 ನೇ ಬ್ಯಾಚ್ ನಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆಗಿ ಆಯ್ಕೆಯಾಗಿದ್ದರು. ಒಂದುವರೆ ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದ ಪರಸಪ್ಪ ಕೊನ್ನೂರು  ಪತ್ನಿ ವಾಯುವಿಹಾರಕ್ಕೆ ತೆರಳಿದ್ದ ವೇಳೆ  ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: police –constable- succide- Mysore