Sunday, August 9, 2026

BDA Apartments

Home Front Page ಪೊಲೀಸರಿಂದ ಪತ್ರಕರ್ತರಿಗೆ ಉಚಿತ ಹೆಲ್ಮೆಟ್ ವಿತರಣೆ

ಪೊಲೀಸರಿಂದ ಪತ್ರಕರ್ತರಿಗೆ ಉಚಿತ ಹೆಲ್ಮೆಟ್ ವಿತರಣೆ

ಮೈಸೂರು,ಜನವರಿ,29,2025 (www.justkannada.in): ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಪೊಲೀಸರು ಪತ್ರಕರ್ತರಿಗೆ  ಉಚಿತ ಹೆಲ್ಮೆಟ್ ವಿತರಿಸಿದರು.

ಇಂದು ನಡೆದ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನದ ಕಾರ್ಯಕ್ರಮದಲ್ಲಿ ಪಿರಿಯಾಪಟ್ಟಣ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಒಟ್ಟು  28 ಮಂದಿಗೆ ಹೆಲ್ಮೆಟ್ ನೀಡಿ ಪೊಲೀಸ್ ಇಲಾಖೆಯಿಂದ ಜಾಗೃತಿ ಮೂಡಿಸಲಾಯಿತು.

ಪ್ರತಿಯೊಬ್ಬರು ಹೆಲ್ಮೆಟ್ ಧರಿಸುವುದು ಕಡ್ಡಾಯ. ಹೆಲ್ಮೆಟ್ ಧರಿಸದೆ ಪ್ರತಿ ವರ್ಷ ಲಕ್ಷಾಂತರ ಮಂದಿ ಸಾವನ್ನಪ್ಪುತ್ತಿದ್ದಾರೆ. ಕೋವಿಡ್, ಕಾಯಿಲೆಗಳಿಗಿಂತಲೂ ಅಪಘಾತದಿಂದ ಹೆಚ್ಚಿನ ಮಂದಿ ಸಾವನ್ನಪ್ಪುತ್ತಿದ್ದಾರೆ . ಪ್ರತಿದಿನ ಮೂರು ಸಾವಿರಕ್ಕೂ ಹೆಚ್ಚು ಮಂದಿ  ಅಪಘಾತದಲ್ಲಿ ಬಲಿಯಾಗುತ್ತಿದ್ದಾರೆ. ಹೆಲ್ಮೆಟ್ ಧರಿಸದೆ ಶೇ.90 ರಷ್ಟು ಸಾವು  ಸಂಭವಿಸುತ್ತಿದ್ದು, ಹೆಲ್ಮೆಟ್ ಧರಿಸದೆ ಬೈಕ್ ಓಡಿಸುವುದು ಅಪರಾಧ. ನಿಮಗೆ ಅಲ್ಲವಾದರೂ ನಿಮ್ಮ ಕುಟುಂಬದವರಿಗಾಗಿ ಹೆಲ್ಮೆಟ್ ಧರಿಸಿ ಎಂದು ಪೊಲೀಸರು ಮನವಿ ಮಾಡಿದರು.

3263 ಮಂದಿ‌ ಭಾರತದಲ್ಲಿ ಪ್ರತಿದಿನ ಅಪಘಾತದಲ್ಲಿ ಸಾವನ್ನಪ್ಪುತ್ತಾರೆ. ಇದನ್ನ ತಪ್ಪಿಸಲು ರಸ್ತೆ ಸುರಕ್ಷತಾ ನಿಯಮಗಳನ್ನ ಪಾಲಿಸಿ. ಒಂದು ಹೆಲ್ಮೆಟ್ ನಿಮ್ಮ ಜೀವ, ಜೀವನ ಎರಡನ್ನೂ ಉಳಿಸುತ್ತದೆ ಎಂದು ಪೊಲೀಸರು ತಿಳಿಸಿದರು.

ಈ ವೇಳೆ ಡಿವೈಎಸ್ಪಿ ಗೋಪಾಲಕೃಷ್ಣ, ಇನ್ಸ್ ಪೆಕ್ಟರ್ ಎಂ.ಕೆ‌‌.ದೀಪಕ್, ಸಬ್ ಇನ್ಸ್ ಪೆಕ್ಟರ್ ಅಜಯ್ , ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ರವಿ ಪಾಂಡವಪುರ ಉಪಸ್ಥಿತರಿದ್ದರು.

Key words: mysore, Police, distribute, free, helmets, journalists