ಮಂಡ್ಯ ,ಸೆಪ್ಟಂಬರ್,8,2025 (www.justkannada.in): ಮಂಡ್ಯಜಿಲ್ಲೆ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳ ವಿರುದ್ದ ಆಕ್ರೋಶ ಭುಗಿಲೆದ್ದಿದ್ದು ಘಟನೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.
ನಿಷೇಧಾಜ್ಞೆ ನಡುವೆಯೂ ಸಾವಿರಾರು ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಹರಸಾಹಸಪಟ್ಟಿದ್ದು ಪ್ರತಿಭಟನಾ ನಿರತರ ಮೇಲೆ ಲಾಠಿಚಾರ್ಜ್ ನಡೆಸಿದ್ದಾರೆ. ಮಹಿಳಾ ಕಾರ್ಯಕರ್ತೆಯರ ಮೇಲೂ ಲಾಠಿ ಚಾರ್ಜ್ ನಡೆದಿದೆ.
ಪ್ರತಿಭಟನೆ ವೇಳೆಯೂ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದ್ದು ಇವರ ಮೇಲೂ ಪೊಲೀಸರು ಲಾಠೀಚಾರ್ಜ್ ನಡೆಸಿದ್ದಾರೆ. ಸದ್ಯ ಮದ್ದೂರಿನಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದ ರೀತಿ ಇದೆ. ಪ್ರತಿಭಟನೆ ವೇಳೆ ಮಹಿಳೆಯರೂ ಸೇರಿ ಹಲವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪರಿಸ್ಥಿತಿ ಉದ್ವಿಗ್ನಗೊಂಡಿದ್ದ ಹಿನ್ನೆಲೆಯಲ್ಲಿ ಮದ್ದೂರಿನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪರಿಸ್ಥಿತಿ ತಿಳಿಗೊಳಿಸಿದ್ದು, ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಾಳೆ ಬೆಳಗ್ಗೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.
Key words: Protest, Maddur:, Police, lathicharge