Friday, July 31, 2026

BDA Apartments

Home Front Page ಪೊಲೀಸರ ವೇತನ ಪರಿಷ್ಕರಣೆ ಮಾಡಿ ಅಧಿಸೂಚನೆ ಪ್ರಕಟಿಸಿದ್ದೇವೆ‌- ಗೃಹ ಸಚಿವ ಬಸವರಾಜ ಬೊಮ್ಮಾಯಿ…

ಪೊಲೀಸರ ವೇತನ ಪರಿಷ್ಕರಣೆ ಮಾಡಿ ಅಧಿಸೂಚನೆ ಪ್ರಕಟಿಸಿದ್ದೇವೆ‌- ಗೃಹ ಸಚಿವ ಬಸವರಾಜ ಬೊಮ್ಮಾಯಿ…

ಬೆಂಗಳೂರು,ಸೆ,14,2019(www.justkannada.in): ಪೊಲೀಸರ ವೇತನ ಪರಿಷ್ಕರಣೆ ವಿಚಾರ ಸಂಬಂಧ, ವೇತನ ಪರಿಷ್ಕರಣೆ ಮಾಡಿ ಅಧಿಸೂಚನೆ ಪ್ರಕಟಿಸಿದ್ದೇವೆ‌ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮೊದಲ ಪಟ್ಡಿಯಲ್ಲಿ ಕೈ ಬಿಟ್ಟು ಹೋಗಿರುವ ಎಸ್ ಐ, ಎಸಿಪಿ ದರ್ಜೆಯ ಅಧಿಕಾರಿಗಳು, ಅಗ್ನಿಶಾಮಕರು ಮತ್ತು ಬಂಧಿಖಾನೆ ಅಧಿಕಾರಿಗಳಿಗೂ ಸಹ ವೇತನ ಪರಿಷ್ಕರಣೆ ಮಾಡಲಾಗುತ್ತದೆ. ಈ ಸಂಬಂಧ ಹಣಕಾಸು ಇಲಾಖೆಗೆ ಪ್ರಸ್ತಾವನೆ ಕಳುಹಿಸಿದ್ದೇವೆ‌ ಎಂದು ಮಾಹಿತಿ ನೀಡಿದರು.

ಜಿಎಸ್ ಟಿ ಕುರಿತಂತೆ ಸೆಪ್ಟಂಬರ್ 20ರಂದು ಪಣಜಿಯಲ್ಲಿ ಜಿಎಸ್ ಟಿ ಕೌನ್ಸಿಲ್ ಮೀಟಿಂಗ್ ಸಭೆ ಇದೆ. ಅದರಲ್ಲಿ ನಾನು ಭಾಗವಹಿಸುತ್ತೇನೆ. ರಾಜ್ಯದ ನಿಲುವು ಪ್ರಕಟಿಸುತ್ತೇನೆ. ಅದಕ್ಕೆ ಪೂರ್ವಭಾವಿಯಾಗಿ ಇಂದು ಬೆಂಗಳೂರಿನಲ್ಲಿ ಸಭೆ ಇದೆ. ಬಿಹಾರ ಡಿಸಿಎಂ ಸುಶೀಲ್ ಕುಮಾರ್ ಮೋದಿ ನೇತೃತ್ವದಲ್ಲಿ ಸಭೆ ನಡೆಯುತ್ತದೆ ಎಂದು ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.

Key words: Police pay revision –notification-  Home Minister- Basavaraja Bommai.