Saturday, August 22, 2026

BDA Apartments

Home Front Page ಬೆಳ್ಳಂಬೆಳಿಗ್ಗೆ ರೌಡಿಶೀಟರ್ ಗಳ ಮನೆ ಮೇಲೆ ಪೊಲೀಸರ ದಾಳಿ: ಹಲವರು ವಶಕ್ಕೆ

ಬೆಳ್ಳಂಬೆಳಿಗ್ಗೆ ರೌಡಿಶೀಟರ್ ಗಳ ಮನೆ ಮೇಲೆ ಪೊಲೀಸರ ದಾಳಿ: ಹಲವರು ವಶಕ್ಕೆ

ಬೆಂಗಳೂರು,ಆಗಸ್ಟ್,27,2024 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಪೊಲೀಸರು ರೌಡಿಶೀಟರ್ ಗಳ ಮನೆ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿ ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಕೋಡಿಗೆಹಳ್ಳಿ, ಯಲಹಂಕ ವಿದ್ಯಾರಣ್ಯಪುರಂ ಸೇರಿದಂತೆ ಹಲವು ಕಡೆ ಆಕ್ಟಿವ್ ಇದ್ದ ರೌಡಿಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಇಂದು ಬೆಳಗ್ಗೆ 5 ಗಂಟೆಯಿಂದಲೂ ಪೊಲೀಸರು ರೌಡಿಶೀಟರ್ ಗಳ ಮನೆ ಮೇಲೆ ದಾಳಿ ನಡೆಸಿದ್ದು ತಪಾಸಣೆ ನಡೆಸಿದ್ದಾರೆ. ಪೊಲೀಸರ ದಾಳಿ ವೇಳೆ ರೌಡಿಶೀಟರ್ ಗಳ ಮನೆಯಲ್ಲಿ ಲಾಂಗ್ ಪತ್ತೆಯಾಗಿದ್ದು, ಹಲವರನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: police, raid, rowdies, house, Bangalore