ಮೈಸೂರು  ಗ್ಯಾಂಗ್ ರೇಪ್ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿ- ಗೃಹ ಸಚಿವ ಅರಗ ಜ್ಞಾನೇಂದ್ರ ಮಾಹಿತಿ.

ಬೆಂಗಳೂರು,ಆಗಸ್ಟ್,28,2021(www.justkannada.in): ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಬಳಿಕ ಪ್ರಕರಣ ಆರೋಪಿಗಳ ಬಂಧನ ಕುರಿತು ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಗ್ಯಾಂಗ್ ರೇಪ್ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನೆರೆಡು ಗಂಟೆಗಳಲ್ಲಿ ಈ ಬಗ್ಗೆ ಸಂಪೂರ್ಣ ಮಾಹಿತಿ ಸಿಗಲಿದೆ. ಪೊಲೀಸರು ಅಥವಾ ನಾನು ಅಧಿಕೃತವಾಗಿ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ತಮಿಳುನಾಡು ಸತ್ಯಮಂಗಲ ಮೂಲದ ಐವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದು ಬಂಧಿತರೆಲ್ಲರೂ ಕೂಲಿಕಾರ್ಮಿಕರು ಎನ್ನಲಾಗಿದೆ.

Key words: police – successful -arrest- Mysore- gang rape- accused- Home Minister- Arga Jnanendra