ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಇಂತಹ ಹೇಳಿಕೆ ಸರಿಯಲ್ಲ- ಅಣುಕು ಪ್ರದರ್ಶನ ಎಂದಿದ್ದ ಹೆಚ್.ಡಿಕೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿರುಗೇಟು….

ಬೆಂಗಳೂರು,ಜ,22,2020(www.justkannada.in): ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬ್ ಪತ್ತೆ ಅಣುಕುಪ್ರದರ್ಶನದಂತಿತ್ತು ಎಂದು ಟೀಕಿಸಿದ್ದ ಮಾಜಿ ಸಿಎಂ ಹೆಚ್.ಡಿ  ಕುಮಾರಸ್ವಾಮಿ ಅವರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಪೊಲೀಸರ ಬಗ್ಗೆ ಹಗುರವಾಗಿ ಮಾತನಾಡಬಾರದು. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೆಚ್.ಡಿ ಕುಮಾರಸ್ವಾಮಿ ಇಂತಹ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಶರಣಾದ ವಿಚಾರ ಕುರಿತು ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪೊಲೀಸರು ಪ್ರಾಮಾಣಿಕವಾಗಿ ನಿಷ್ಪಕ್ಷಪಾತವಾಗಿ ತನಿಖೆ ಕೈಗೊಂಡು ಆರೋಪಿ ಪತ್ತೆಗೆ ಕ್ರಮ ಕೈಗೊಂಡಿದ್ದರು. ಆರೋಪಿಯೇ  ಪೊಲೀಸರಿಗೆ ಶರಣಾಗಿದ್ದಾನೆ. ಆತ ನಿರಾಶೆ ಹೊಂದಿರುವ ಇಂಜಿನಿಯರಿಂಗ್ ಪದವೀಧ . ಉಡುಪಿ ಮೂಲದ ಆದಿತ್ಯ ರಾವ್ ಈ ಹಿಂದೆ ಹುಸಿ ಬಾಂಬ್ ಕರೆ ಮಾಡಿ ಜೈಲು ಶಿಕ್ಷೆ ಅನುಭವಿಸಿದ್ದ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು  ತಿಳಿಸಿದರು.

ಹಾಗೆಯೇ ನಾವು ಯಾರ ಮೇಲೂ ಆರೋಪಿಸಿರಲಿಲ್ಲ. ವ್ಯಕ್ತಿ ಸಂಘಟನೆಗಳ ಮೇಲೆ ಆರೋಪಿಸಿರಲಿಲ್ಲ. ತಪ್ಪಿತಸ್ಥರನ್ನ ಹಿಡಿಯುತ್ತೇವೆ ಎಂದಿದ್ದವು. ಆದರಂತೆ ಹಿಡಿದ್ದಿದ್ದೇವೆ. ಹೆಚ್ಡಿಕೆ ಪೊಲೀಸರ ಬಗ್ಗೆ ಹಗುರವಾಗಿ ಮಾತನಾಡಬಾರದು. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಇಂತಹ ಹೇಳಿಕೆ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Key words: political –former CM- HD kumaraswamy – tweet- Home Minister -Basavaraja Bommai