ಜನವರಿಯಲ್ಲಿ ರಾಜಕೀಯ ಪಕ್ಷ ಆರಂಭ : ಸೂಪರ್ ಸ್ಟಾರ್ ರಜನಿಕಾಂತ್ ಟ್ವೀಟ್

ಚೆನ್ನೈ,ಡಿಸೆಂಬರ್,03,2020(www.justkannada.in) : ಸೂಪರ್ ಸ್ಟಾರ್ ರಜನಿಕಾಂತ್ ಮುಂದಿನ ವರ್ಷ ಜನವರಿಯಲ್ಲಿ ರಾಜಕೀಯ ಪಕ್ಷ ಆರಂಭಿಸಲಿದ್ದು, ಡಿಸೆಂಬರ್ 31ರಂದು ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ.

logo-justkannada-mysore

ಇಷ್ಟು ದಿನಗಳ ಊಹಾಪೋಹ, ಕಾಯುವಿಕೆಗೆ ಕೊನೆಗೂ ಸೂಪರ್ ಸ್ಟಾರ್ ರಜನಿಕಾಂತ್ ತೆರೆ ಎಳೆದಿದ್ದಾರೆ. ಇಂದು ಟ್ವೀಟ್ ಮೂಲಕ ವಿಷಯ ಪ್ರಕಟಿಸಿರುವ ರಜನಿಕಾಂತ್, ಈಗ ಬದಲಾವಣೆ, ರೂಪಾಂತರ ತಾರದಿದ್ದರೆ ಮತ್ತೆ ಯಾವಾಗಲೂ ಸಾಧ್ಯವಿಲ್ಲ ಎಂದಿದ್ದಾರೆ.

ಜನವರಿಯಲ್ಲಿ ಪಕ್ಷ ಆರಂಭವಾಗುತ್ತದೆ, ಸಂಬಂಧ ಡಿಸೆಂಬರ್ 31ರಂದು ಘೋಷಣೆ ಮಾಡಲಾಗುವುದು. ಮುಂದಿನ ವರ್ಷದ ವಿಧಾನಸಭೆ ಚುನಾವಣೆಯಲ್ಲಿ ಜನರ ಬೆಂಬಲದೊಂದಿಗೆ ಧಾರ್ಮಿಕ ರಾಜಕೀಯ ತಮಿಳು ನಾಡಿನಲ್ಲಿ ಆರಂಭವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

Political-party-start-January-Superstar-Rajinikanth-tweeted

ಮುಂದಿನ ವರ್ಷ ತಮಿಳು ನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು, ಜನರ ಬೆಂಬಲದೊಂದಿಗೆ ಪ್ರಾಮಾಣಿಕ, ಪಾರದರ್ಶಕ, ಭ್ರಷ್ಟಾಚಾರ ರಹಿತ, ಜಾತ್ಯತೀತ ರಾಜಕೀಯ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು ಎಂಬ ಆಶಯವ್ಯಕ್ತಪಡಿಸಿದ್ದಾರೆ.

key words : Political-party-start-January-Superstar-Rajinikanth-tweeted