ನನ್ನ ಹೆಸರಿನಲ್ಲಿ ಅಭಿಮಾನಿಗಳ ಸಂಘ, ಟ್ರಸ್ಟ್ ಮಾಡುವಂತಿಲ್ಲ- ಕಾನೂನು ಕ್ರಮದ ಎಚ್ಚರಿಕೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್..

ಬೆಂಗಳೂರು,ಆ,11,2020(www.justkannada.in): ನನ್ನ ಹೆಸರು ಬಳಸಿಕೊಂಡು ಯಾರೂ ಕೂಡ ಅಭಿಮಾನಿಗಳ ಸಂಘ, ಟ್ರಸ್ಟ್, ಮತ್ತಿತರ ಸಂಘಟನೆಗಳನ್ನು ಮಾಡಿಕೊಳ್ಳುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.jk-logo-justkannada-logo

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಈಗಾಗಲೇ ಅಸ್ತಿತ್ವದಲ್ಲಿರುವ ಎಂ ಎಸ್ ಅಂಗಡಿ ನೇತೃತ್ವದ ಅಖಿಲ ಕರ್ನಾಟಕ ಡಿ.ಕೆ ಶಿವಕುಮಾರ್  ಅಭಿಮಾನಿಗಳ ಸಂಘವನ್ನು ಹೊರತುಪಡಿಸಿ ನನ್ನ ಹೆಸರಿನ ಅಭಿಮಾನಿ ಸಂಘ, ಸಂಸ್ಧೆಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಿಸರ್ಜಿಸಬೇಕು.fan-club-my-name-cannot-use-kpcc-presiden-t-dk-sivakumar-legal-warning

ಒಂದೊಮ್ಮೆ ಯಾರಾದರೂ ನನ್ನ ಹಾಗೂ ನನ್ನ ಸಹೋದರ ಡಿ ಕೆ ಸುರೇಶ್  ಹೆಸರಿನ ಸಂಘ ಸಂಸ್ಥೆಗಳ ಮೂಲಕ ಚಟುವಟಿಕೆ ನಡೆಸಿದರೆ, ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಿ.ಕೆ ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.

Key words:  fan club- my name- cannot –use- KPCC presiden-t DK Sivakumar -legal -warning.