ಸಂಸ್ಥಾಪನಾ ದಿನದಂದೇ ಬಾವುಟ ಬಿದ್ದುಹೋಗಿದೆ: ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಅನ್ನೋದು ತಿರುಕನ ಕನಸು- ಸಚಿವ ಆರ್.ಅಶೋಕ್ ಟೀಕೆ.

Promotion

ಹುಬ್ಬಳ್ಳಿ,ಡಿಸೆಂಬರ್,29,2021(www.justkannada.in):  ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಅನ್ನೋದು ತಿರುಕನ ಕನಸು. ಕಾಂಗ್ರೆಸ್ ನಾಯಕರು ಅಧಿಕಾರಕ್ಕೆ ಬರುತ್ತೇವೆ ಎಂದು ಹಗಲುಗನಸು ಕಾಣೋದು ಬೇಡ ಎಂದು ಕಂದಾಯ ಸಚಿವ ಆರ್.ಅಶೋಕ್ ಟೀಕಿಸಿದರು.

ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಆರ್.ಅಶೋಕ್, ಕಾಂಹಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲ್ಲ. ಕಾಂಗ್ರೆಸ್ ಸಂಸ್ಥಾಪನಾ ದಿನದಂದು ಬಾವುಟ ಬಿದ್ದು ಹೋಗಿದೆ. ದೇಶದಲ್ಲೇ  ಕಾಂಗ್ರೆಸ್ ಧೂಳಿಪಟವಾಗಿದೆ.  ಕಾಂಗ್ರೆಸ್ ನಾಯಕರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದರು.

ಸಿಎಂ ಬದಲಾವಣೆ ಇಲ್ಲ.  ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಬಿಜೆಪಿ ಪಕ್ಷ ಕಟ್ಟುವ ನಿಟ್ಟಿನಲ್ಲಿ ಚರ್ಚೆ ನಡೆದಿದ್ದು, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಆ ಕುರಿತು ಕಾರ್ಯಕಾರಿಣಿಯಲ್ಲಿ ಚರ್ಚೆಯೂ ಆಗಿಲ್ಲ. ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಸರ್ಕಾರ ವಿಶೇಷ ಯೋಜನೆಗಳನ್ನು ಮಾಡಿದೆ . ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೈಗೊಂಡ ಜನಪರ ಕೆಲಸವನ್ನು ಜನರಿಗೆ ಮುಟ್ಟಿಸುವ ಕುರಿತಂತೆ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದರು.

Key words:  flag -fallen off -Congress –no power-Minister -R. Ashok