ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವಂತೆ ಹೈಕಮಾಂಡ್ ಸೂಚಿಸಿದರೇ ಅದಕ್ಕೆ ಬದ್ದ- ಮಾಜಿ ಸಿಎಂ ಜಗದೀಶ್ ಶೆಟ್ಟರ್.

Promotion

ಹುಬ್ಬಳ್ಳಿ,ಫೆಬ್ರವರಿ,10,2024(www.justkannada.in):   ಧಾರವಾಡ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವಂತೆ ಹೈಕಮಾಂಡ್ ಸೂಚಿಸಿದರೇ ಅದಕ್ಕೆ ಬದ್ದ ಎಂದು ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್,  ನಾನು ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ವರಿಷ್ಠರು ಚರ್ಚೆ ಮಾಡಿಲ್ಲ. ಈ ಬಗ್ಗೆ ನಾನು ಸಹ ಯೋಚಿಸಿಲ್ಲ. ಪಕ್ಷದ ಕೇಂದ್ರ ವರಿಷ್ಠರು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್,  ಯಾವುದೇ ಪಕ್ಷದ ನಾಯಕರಾಗಿರಲಿ ಹೇಳಿಕೆ ನೀಡುವಾಗ ಲಕ್ಷ್ಮಣ ರೇಖೆ ದಾಟಬಾರದು. ಯಾರೂ ಸಹ ಈ ರೀತಿ ಹೇಳಿಕೆ ಕೊಡಬಾರದು ಎಂದರು.

Key words: Former CM- Jagdish Shettar-High Command- suggestion- contest