ಇಡಿಯಿಂದ ಸೋನಿಯಾ ಗಾಂಧಿ ಅವರ ವಿಚಾರಣೆ ನಿಲ್ಲುವವರೆಗೂ ಪ್ರತಿಭಟನೆ ನಿಲ್ಲಲ್ಲ- ಡಿ.ಕೆ ಶಿವಕುಮಾರ್.

Promotion

ಬೆಂಗಳೂರು,ಜುಲೈ,26,2022(www.justkannada.in): ನ್ಯಾಷನಲ್ ಹೆರಾಲ್ಡ್  ಹಗರಣಕ್ಕೆ ಸಂಬಂಧಿಸಿದಂತೆ ಇಂದು  ಜಾರಿ ನಿರ್ದೇಶನಾಲಯ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನ ವಿಚಾರಣೆ ನಡೆಸುತ್ತಿದ್ದು ಇದನ್ನ ವಿರೋಧಿಸಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆಗಿಳಿದಿದ್ದಾರೆ.

ಇಂದು ಇಡಿಯಿಂದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ  ವಿಚಾರಣೆ ವಿರೋಧಿಸಿ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ರಾಜ್ಯದಲ್ಲೂ ಸಹ ಸೋನಿಯಾ ಗಾಂಧಿ ಪರ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಮೌನ ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಕುರಿತು ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಇಡಿ ವಿಚಾರಣೆ ನಡೆಸುವಷ್ಟು ಸಮಯ ಪ್ರತಿಭಟನೆ ಮಾಡ್ತೀವಿ. ಸೋನಿಯಾ ಗಾಂಧಿ ಅವರ ವಿಚಾರಣೆ ನಿಲ್ಲಿಸುವವರೆಗೂ ಪ್ರತಿಭಟನೆ ನಿಲ್ಲಿಸಲ್ಲ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತೇವೆ ಎಂದಿದ್ದಾರೆ.

Key words: protest -not stop – ED -trial -Sonia Gandhi- ends-DK Shivakumar.