ಯುಪಿ ವಿಧಾನಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಯೋಗಿ ಆದಿತ್ಯನಾಥ್ ನಾಮಪತ್ರ ಸಲ್ಲಿಕೆ

Promotion

ಉತ್ತರ ಪ್ರದೇಶ,ಫೆಬ್ರವರಿ,4,2022(www.justkannada.in):  ಉತ್ತರ ಪ್ರದೇಶದಲ್ಲಿ ವಿಧಾನಸಭೆಗೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಈ ಮಧ್ಯೆ   ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಶುಕ್ರವಾರ ಗೋರಖ್‌ಪುರ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಯೋಗಿ ಆದಿತ್ಯನಾಥ ಅವರು ಇಂದು ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು,  ನಾಮಪತ್ರ ಸಲ್ಲಿಕೆ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿ ಹಲವರು ಉಪಸ್ಥಿತರಿದ್ದರು.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10ರಿಂದ ವಿಧಾನಸಭಾ ಚುನಾವಣೆ ನಡೆಯಲಿದ್ದು ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ. ಐದು ರಾಜ್ಯಗಳ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು ಮಾರ್ಚ್ 10 ರಂದು ಐದು ರಾಜ್ಯಗಳ ಚುನಾವಣಾ ಫಲಿತಾಂಶ ಹೊರ ಬೀಳಲಿದೆ.

Key words: UP- Assembly Elections-Yogi Adityanath