Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಶಿವರಾಜ್ ಕುಮಾರ್ ರಿಂದ ಮತದಾನ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಶಿವರಾಜ್ ಕುಮಾರ್ ರಿಂದ ಮತದಾನ.

ಕಲ್ಬುರ್ಗಿ,ಮೇ,10,2023(www.justkannada.in): ಇಂದು ರಾಜ್ಯ ವಿಧಾನಸಭಾ ಚುನಾವಣಾ ಮತದಾನ ನಡೆಯುತ್ತಿದ್ದು ಇಂದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಈ ನಡುವೆ ಹಲವು ಗಣ್ಯಾತೀಗಣ್ಯರು ಮತಗಟ್ಟೆಗೆ ಆಗಮಿಸಿ ತಮ್ಮ ಮತ ಚಲಾಯಿಸುತ್ತಿದ್ದಾರೆ.

ಕಲಬುರುಗಿಯ  ಬಸವನಗರ ಸರ್ಕಾರಿ ಶಾಲೆಯಲ್ಲಿ  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತದಾನ  ಮಾಡಿದರು. ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ರಾಚೇನಹಳ್ಳಿಯಲ್ಲಿ ನಟ ಶಿವರಾಜ್ ಕುಮಾರ್ ದಂಪತಿ ತಮ್ಮ ಮತದಾನದ ಹಕ್ಕು ಚಲಾಯಿಸಿದರು.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಶಿವರಾಜ್ ಕುಮಾರ್ ರಿಂದ ಮತದಾನ voted

ಇನ್ನೊಂದೆಡೆ ಬೆಂಗಳೂರಿನ ವಿಜಯನಗರದ ಸುಬ್ಬಣ್ಣ ಗಾರ್ಡನ್ ನಲ್ಲಿ ಮತದಾನ. ನಟಿ ರಕ್ಷಿತಾ ನಿರ್ದೇಶಕ ಪ್ರೇಮ್ ಮತದಾನ ಮಾಡಿದರು. ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಅವರು ಸಿದ್ದರಾಮನ ಹುಂಡಿಯಲ್ಲಿ ಮತ ಚಲಾಯಿಸಿದರು.

Key words: Polling – AICC- President -Mallikarjuna Kharge- Shivraj Kumar.