ಮೈಸೂರಿನಲ್ಲಿ ಕಲುಷಿತ ನೀರಿಗೆ ಓರ್ವ ಬಲಿ: ಬೆಂಗಳೂರಿನಲ್ಲಿ ಮುನ್ನಚ್ಚರಿಕೆ ವಹಿಸಲು ಡಿಸಿಎಂ ಡಿಕೆ ಶಿವಕುಮಾರ್ ಪತ್ರ.

ಬೆಂಗಳೂರು,ಮೇ,24,2024 (www.justannada.in):  ಕಲುಷಿತ ನೀರು ಕುಡಿದು ಮೈಸೂರಿನ ಕೆ.ಸಾಲುಂಡಿ ಗ್ರಾಮದ ಯುವಕ ಸಾವನ್ನಪ್ಪಿ ಹಲವರು ಅಸ್ವಸ್ಥರಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸ್ವಚ್ಛತೆ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಸೂಚಿಸಿದ್ದಾರೆ.

ಈ ಸಂಬಂಧ ಬಿಬಿಎಂಪಿ ಕಮಿಷನರ್,  ಜಲಮಂಡಳಿ ಅಧ್ಯಕ್ಷರಿಗೆ ಪತ್ರ ಬರೆದಿರುವ ಡಿಸಿಎಂ ಡಿಕೆ ಶಿವಕುಮಾರ್, ಬೆಂಗಳೂರಿನಲ್ಲಿ ಮುನ್ನೆಚರಿಕೆ ವಹಿಸಲು ಸೂಚಿಸಿದ್ದಾರೆ.

ನೀರಿನ ಸ್ಯಾಂಪಲ್ ಪರೀಕ್ಷಿಸಿ  ಸರಬರಾಜು ಮಾಡಿ. ಯಾವುದೇ ಆರೋಗ್ಯ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಿ.  ಲೋಪ ಎಸಗುವವರ ವಿರುದ್ದ ಕ್ರಮ ಕೈಗೊಳ್ಳಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

Key words: pollute, water, DK Shivakumar, precautions