ನನ್ನ ಭಾವನೆಗಳಿಗೆ ಸಿಎಂ ಸಕಾರಾತ್ಮಕ ಸ್ಪಂದಿಸಿರುವುದು ಶಿಕ್ಷಕರ ವೃತ್ತಿ ಗೌರವಕ್ಕೆ ಸಮರ್ಪಿಸಿದ ಗುರುದಕ್ಷಿಣೆ-ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…

ಬೆಂಗಳೂರು,ಅಕ್ಟೋಬರ್,11,2020(www.justkannada.in):  ಕೊರೋನಾ ಸಂಕಷ್ಟದ ನಡುವೆ ಶಾಲೆಗೆ ತೆರಳಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕರ ಮಧ್ಯಂತರ ರಜೆ ರದ್ಧು ಮಾಡಿದ್ದಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿ ಶಿಕ್ಷಕರಿಗೆ  ಮಧ್ಯಂತರ ರಜೆ  ಘೋಷಿಸುವಂತೆ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿ ಆಗ್ರಹಿಸಿದ್ದರು.positive response - CM - my feelings –teachers-Former CM -HD Kumaraswamy.

ಈ ಬೆನ್ನಲೆ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಶಿಕ್ಷಕರಿಗೆ ಮೂರು ವಾರಗಳ ಕಾಲ ಮಧ್ಯಂತರ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

ಈ ಸಂಬಂಧ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕಳೆದೊಂದು ವಾರದಿಂದ ಶಿಕ್ಷಕ ಸಮುದಾಯದ ನಾನಾ ರೀತಿಯ ಕಷ್ಟ ಕಾರ್ಪಣ್ಯಗಳನ್ನು ಕಂಡು ನನ್ನ ಮನಸು ವಿಹ್ವಲಗೊಂಡಿತ್ತು. ನನ್ನ ಭಾವನೆಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಕಾರಾತ್ಮಕವಾಗಿ ಸ್ಪಂದಿಸಿರುವುದು ಶಿಕ್ಷಕರ ವೃತ್ತಿ ಗೌರವಕ್ಕೆ ಸಮರ್ಪಿಸಿದ ಗುರುದಕ್ಷಿಣೆ ಎಂದು ನುಡಿದಿದ್ದಾರೆ.

ರಾಜ್ಯದ ಶಿಕ್ಷಕರ ಸಮಸ್ಯೆಗಳನ್ನು ನನ್ನ ಸಮಸ್ಯೆಗಳೆಂದೇ ಸದಾ ಭಾವಿಸುವ ನನ್ನ ನಿಲುವಿಗೆ ರಾಜ್ಯದ ವಿದ್ಯಾರ್ಥಿಗಳು, ಪೋಷಕರು, ಮಾಧ್ಯಮಗಳು ಕೂಡ ನನ್ನ ಬೆಂಬಲಕ್ಕೆ ನಿಂತಿದ್ದು ಅವರಿಗೆಲ್ಲ ಕೃತಜ್ಞನಾಗಿದ್ದೇನೆ ಎಂದು ಹೆಚ್.ಡಿ ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.positive response - CM - my feelings –teachers-Former CM -HD Kumaraswamy.

ಹಾಗೆಯೇ ಅಕ್ಕಮಹಾದೇವಿ ಅವರ ವಚನವನ್ನ ಟ್ವಿಟ್ಟರ್ ನಲ್ಲಿ ಸ್ಮರಿಸಿದ್ದಾರೆ.

ನರಜನ್ಮವ ತೊಡೆದು ಹರಜನ್ಮವ ಮಾಡಿದ ಗುರುವೆ ನಮೋ

ಭವಬಂಧನವ ಬಿಡಿಸಿ ಪರಮಸುಖವ ತೋರಿದ ಗುರುವೆ ನಮೋ

ಭವಿಯೆಂಬುದ ತೊಡೆದು ಭಕ್ತೆ ಎಂದೆನಿಸಿದ ಗುರುವೆ ನಮೋ

ಚೆನ್ನಮಲ್ಲಿಕಾರ್ಜುನನ ತಂದೆನ್ನ

ಕೈವಶಕ್ಕೆ ಕೊಟ್ಟ ಗುರುವೆ ನಮೋ ನಮೋ

ಅಕ್ಕಮಹಾದೇವಿ

Key words: positive response – CM – my feelings –teachers-Former CM -HD Kumaraswamy.